ಹನೂರಿನ ಮಾದೇಶ್ವರ ಬೆಟ್ಟದಲ್ಲಿ ಮಳೆಗಾಗಿ ವಿಶೇಷ ಪೂಜೆ

| Published : Sep 25 2024, 12:55 AM IST

ಹನೂರಿನ ಮಾದೇಶ್ವರ ಬೆಟ್ಟದಲ್ಲಿ ಮಳೆಗಾಗಿ ವಿಶೇಷ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ, ಉತ್ಸವ ಮೂರ್ತಿ ಮೆರವಣಿಗೆ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನಸ್ವಾಮಿ ನೇತೃತ್ವದಲ್ಲಿ ಜರುಗಿತು.

ಕನ್ನಡಪ್ರಭ ವಾರ್ತೆ ಹನೂರು

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ, ಉತ್ಸವ ಮೂರ್ತಿ ಮೆರವಣಿಗೆ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನಸ್ವಾಮಿ ನೇತೃತ್ವದಲ್ಲಿ ಜರುಗಿತು.ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಸಮುದಾಯದ ಸಂಪ್ರದಾಯದಂತೆ ಸೋಮವಾರ ಶಿವ ಪಾರ್ವತಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮಾಡುವ ಮೂಲಕ ಛತ್ರಿ ಚಾಮರ ನಂದಿ ಕಂಬ ಜಾಗಟೆ ವಾದ್ಯ ಮೇಳಗಳೊಂದಿಗೆ ಮಲೆ ಮಹದೇಶ್ವರ ಬೆಟ್ಟದ ತಂಬಡಗೇರಿ ಹೊಸ ಕೊಳ ಬಳಿ ಉತ್ಸವ ಮೂರ್ತಿಯನ್ನು ಇರಿಸಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಧಾರ್ಮಿಕವಾಗಿ ಬೇಡಗಂಪಣ ಅರ್ಚಕರು ಪೂಜೆ ನೆರವೇರಿಸುವ ಮೂಲಕ ಮಳೆರಾಯನಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಮಳೆಗಾಗಿ ಪ್ರಾರ್ಥನೆ: ಮಲೆ ಮಾದೇಶ್ವರ ಬೆಟ್ಟದಲ್ಲಿ ಪ್ರತಿವರ್ಷ ನಡೆಯುವ ಪೂಜಾ ಕಾರ್ಯಕ್ರಮದಂತೆ ಸೋಮವಾರ ಬೇಡಗಂಪಣ ಅರ್ಚಕರ ಸಮುದಾಯದ ಸಂಪ್ರದಾಯದಂತೆ ಶಿವ ಪಾರ್ವತಿ ಉತ್ಸವ ಮೂರ್ತಿಯನ್ನು ಪೂಜೆ ಸಲ್ಲಿಸಿ ಮೆರವಣಿಗೆ ಮಾಡಲಾಯಿತು. ಮಳೆಗಾಗಿ ಮಳೆರಾಯನಿಗಾಗಿ ಪೂಜಾ ಕಾರ್ಯಕ್ರಮ ನಡೆಯಿತು.

ಅರಣ್ಯದಂಚಿನ ದೇಗುಲಗಳಲ್ಲಿ ವಿಶೇಷ ಪೂಜೆ:

ಬೇಡಗಂಪಣ ಅರ್ಚಕರು ಸಂಪ್ರದಾಯದಂತೆ ಮಾಡುವ ಪೂಜಾ ಕಾರ್ಯಕ್ರಮವನ್ನು ಅರಣ್ಯದಂಚಿನಲ್ಲಿ ಬರುವ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ತಂಬಡಗೇರಿ ಹೊಸಕೊಳ ಬಳಿ ಪೂಜೆ, ಹೋಮ, ಹವನ ಕಾರ್ಯಕ್ರಮಗಳು ಧಾರ್ಮಿಕವಾಗಿ ಜರುಗಿತು. ಇದೇ ಸಂದರ್ಭದಲ್ಲಿ ಬೇಡಗಂಪಣ ಸಮುದಾಯದ ಹಿರಿಯ ಮುಖಂಡ ಪುಟ್ಟಣ್ಣ, ಮುರುಗಗೌಡ್ರು, ಪುಟ್ಟಪ್ಪ, ಆರ್ಚಕ ವೃಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.