ನೂತನ ರಾಜ್ಯ ಸರ್ಕಾರದಲ್ಲಿ ಅರಸೀಕೆರೆ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಆಗ್ರಹಿಸಿ ತಾಲೂಕಿನ ದೊಡ್ಡಮೇಟಿಕುರ್ಕೆ ಗ್ರಾಮದಲ್ಲಿ ಅವರ ಅಭಿಮಾನಿಗಳು ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಿದರು. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ದೊರೆತರೆ ಅದು ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವಾಗಲಿದೆ. ಸರ್ಕಾರ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಮತ್ತು ಅನುಭವ ಅವರಲ್ಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅರಸೀಕೆರೆ: ನೂತನ ರಾಜ್ಯ ಸರ್ಕಾರದಲ್ಲಿ ಅರಸೀಕೆರೆ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಆಗ್ರಹಿಸಿ ತಾಲೂಕಿನ ದೊಡ್ಡಮೇಟಿಕುರ್ಕೆ ಗ್ರಾಮದಲ್ಲಿ ಅವರ ಅಭಿಮಾನಿಗಳು ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಿದರು.ಗ್ರಾಮದ ಅಧಿದೇವತೆ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಅಮಾವಾಸ್ಯೆ ಅಂಗವಾಗಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ ಶಿವಲಿಂಗೇಗೌಡರ ಬೆಂಬಲಿಗರು ಮತ್ತು ಅಭಿಮಾನಿಗಳು, ಕ್ಷೇತ್ರದ ಅಭಿವೃದ್ಧಿಗೆ ಅವರ ಸೇವೆಯನ್ನು ಸ್ಮರಿಸಿ ಸಚಿವ ಸ್ಥಾನ ದೊರೆಯುವಂತೆ ದೇವರಲ್ಲಿ ಪ್ರಾರ್ಥಿಸಿದರು. ಬಳಿಕ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿಂದುಳಿದ ಸಮಾಜದ ಮುಖಂಡ ಡಿ.ಜೆ. ಸುರೇಶ್, “ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮತ್ತು ಅನುಭವಿ ಶಾಸಕರಾಗಿ ಕೆ.ಎಂ. ಶಿವಲಿಂಗೇಗೌಡರು ಗುರುತಿಸಿಕೊಂಡಿದ್ದಾರೆ. ಸತತ ನಾಲ್ಕು ಬಾರಿ ಜನರ ಆಶೀರ್ವಾದದಿಂದ ಗೆಲುವು ಸಾಧಿಸಿರುವುದು ಅವರ ಜನಪರ ಕಾರ್ಯಗಳಿಗಿರುವ ಮಾನ್ಯತೆಯಾಗಿದೆ. ರಾಜ್ಯ ರಾಜಕೀಯದಲ್ಲಿ ಅವರ ಅನುಭವ, ಆಡಳಿತಾತ್ಮಕ ಸಾಮರ್ಥ್ಯ ಹಾಗೂ ಅಭಿವೃದ್ಧಿ ದೃಷ್ಟಿಕೋನವನ್ನು ಗಮನಿಸಿ ಸರ್ಕಾರ ಸಚಿವ ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದರು.ಅರಸೀಕೆರೆ ಕ್ಷೇತ್ರದ ಇತಿಹಾಸದಲ್ಲಿ ಜನರಿಂದ ನಿರಂತರವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸಚಿವ ಸ್ಥಾನ ದೊರೆತ ಉದಾಹರಣೆ ವಿರಳವಾಗಿದೆ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ದೊರೆತರೆ ಅದು ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವಾಗಲಿದೆ. ಸರ್ಕಾರ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಮತ್ತು ಅನುಭವ ಅವರಲ್ಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಶಶಿವಾಳ ಕಟ್ಟಪ್ಪ, ಸೊಪ್ಪನಹಳ್ಳಿ ರಮೇಶ್, ಜನ್ನವರ ಚಂದ್ರಪ್ಪ, ಜಗದೀಶ್, ರವಿಕುಮಾರ್, ಜೆಸಿಪಿ ಕುಮಾರ್, ಹಳ್ಳಿಮೈಸೂರು ಬಸವರಾಜ್, ಡಿ.ಕೆ. ಹರೀಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಶಿವಲಿಂಗೇಗೌಡರ ಅಭಿಮಾನಿಗಳು ಭಾಗವಹಿಸಿದ್ದರು.