ಸಾರಾಂಶ
ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವಾಂಗ ಬಡಾವಣೆಯ ಶ್ರೀ ಚೌಡೇಶ್ವರಿ ಹಾಗೂ ಶ್ರೀ ಬನಶಂಕರಿ ದೇವಿ ದೇವಾಲಯಗಳಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ ಪ್ರಯುಕ್ತ ಪ್ರತಿದಿನ ಸಂಜೆ ವಿಶೇಷ ಪೂಜೆ ವಿಜೃಂಭಣೆಯಿಂದ ನಡೆಯಲಿದೆ.

ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಪ್ರಾಂಗಣದಲ್ಲಿ ವಿಶೇಷ ವೇದಿಕೆ ನಿರ್ಮಿಸಿ, ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಉತ್ಸವಮೂರ್ತಿ, ಪರಿವಾರ ದೇವತೆಗಳು ಹಾಗೂ ಶ್ರೀ ಲಕ್ಷ್ಮೀದೇವಿ ಮೂರ್ತಿಯ ಪ್ರತಿಷ್ಠಾಪಿಸಲಾಗಿದೆ. ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಪ್ರತಿದಿನ ಶ್ರೀ ಸ್ವಾಮಿಯ ಮೂರ್ತಿಗೆ ಪ್ರತಿದಿನ ಮುಂಜಾನೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇದ್ಯ, ತಥಿ ಆರಾಧನೆ ಸೇವೆ, ಅರ್ಚನೆ, ಮಂಗಳಾರತಿ ನೆರವೇರಿಸಲಾಗುತ್ತದೆ.ಸಂಜೆ ೬.೩೦ಕ್ಕೆ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ, ಶ್ರೀ ಲಕ್ಷ್ಮೀ ದೇವಿ ಹಾಗೂ ಶ್ರೀ ದುರ್ಗಾದೇವಿ ಹಾಗೂ ಲಲಿತ ಸಹಸ್ರ ನಾಮಾರ್ಚನೆ ನಂತರ ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತದೆ.
ದೇವಾಂಗ ಬಡಾವಣೆಯ ಶ್ರೀ ಚೌಡೇಶ್ವರಿ ಹಾಗೂ ಶ್ರೀ ಬನಶಂಕರಿ ದೇವಿ ದೇವಾಲಯಗಳಲ್ಲಿ ಶ್ರೀದೇವಿಯ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಪೂಜಾ ಮಹೋತ್ಸವ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.