ದಶಮಂಟಪ ಸಮಿತಿಯಿಂದ ನಾಳೆ ಪಾಡಿ ಶ್ರೀಇಗ್ಗುತ್ತಪ್ಪ, ತಲಕಾವೇರಿ ಕ್ಷೇತ್ರದಲ್ಲಿ ವಿಶೇಷ ಪೂಜೆ

| Published : Sep 07 2025, 01:01 AM IST

ದಶಮಂಟಪ ಸಮಿತಿಯಿಂದ ನಾಳೆ ಪಾಡಿ ಶ್ರೀಇಗ್ಗುತ್ತಪ್ಪ, ತಲಕಾವೇರಿ ಕ್ಷೇತ್ರದಲ್ಲಿ ವಿಶೇಷ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿಕೇರಿ ದಸರಾ ದಶ ಮಂಟಪ ಸಮಿತಿ ವತಿಯಿಂದ ಸೆ. 7ರಂದು ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ಬಿ.ಎಂ. ಹರೀಶ್‌ ಅಣ್ವೇಕರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ದಸರಾ ಆಚರಣೆಯ ಸಂದರ್ಭ ಮಳೆಗೆ ವಿರಾಮ ನೀಡಬೇಕು ಮತ್ತು ದಸರಾ ಜನೋತ್ಸವ ನಿರ್ವಿಘ್ನವಾಗಿ ನಡೆಯಬೇಕೆಂದು ಪಾಡಿ ಶ್ರೀಇಗ್ಗುತ್ತಪ್ಪ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಮಡಿಕೇರಿ ದಸರಾ ದಶಮಂಟಪ ಸಮಿತಿ ವತಿಯಿಂದ ಸೆ.7 ರಂದು ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ತಿಳಿಸಿದ್ದಾರೆ.ನಗರದಲ್ಲಿ ದಶಮಂಟಪ ಸಮಿತಿ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಸರಾ ಸಂದರ್ಭ ಮಳೆ ಇಲ್ಲದೆ ಸಂಭ್ರಮದಿಂದ ಹಬ್ಬ ಆಚರಣೆಯಾಗಬೇಕೆಂದು ಪಾಡಿ ಶ್ರೀಇಗ್ಗುತ್ತಪ್ಪ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಭಾನುವಾರ ಬೆಳಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಎಲ್ಲಾ ಸಮಿತಿ, ಉಪ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ದಶಮಂಟಪಗಳ ಅದ್ದೂರಿಯ ಶೋಭಾಯಾತ್ರೆಗೆ ಸರ್ವರು ಸಹಕರಿಸುವಂತೆ ಕೋರಿದರು.ಇದೇ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ದಶಮಂಟಪ ಸಮಿತಿಗಳ ಹಿರಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಸಂಚಾರಕ್ಕಾಗಿ ಶ್ರಮಿಸುತ್ತಿರುವ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.