ಸಾರಾಂಶ
ನರೇಂದ್ರ ಮೋದಿ ಅವರು ಮೂರನೇ ಬಾರಿ ನಮ್ಮ ದೇಶದ ಪ್ರಧಾನಮಂತ್ರಿ ಆಗಲೆಂದು ಹಾಗೂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ಆರಿಸಿ ಬರಲೆಂದು ಲಕ್ಷ್ಮೇಶ್ವರ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿಸಲಾಯಿತು.
ಲಕ್ಷ್ಮೇಶ್ವರ: ನರೇಂದ್ರ ಮೋದಿ ಅವರು ಮೂರನೇ ಬಾರಿ ನಮ್ಮ ದೇಶದ ಪ್ರಧಾನಮಂತ್ರಿ ಆಗಲೆಂದು ಹಾಗೂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ಆರಿಸಿ ಬರಲೆಂದು ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಶಿರಹಟ್ಟಿ ಬಿಜೆಪಿ ಮಂಡಲ, ಯುವ ಮೋರ್ಚಾ ಹಾಗೂ ಲಕ್ಷ್ಮೇಶ್ವರ ನಗರ ಘಟಕದ ವತಿಯಿಂದ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿಸಲಾಯಿತು.
ಈ ವೇಳೆ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ. ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಮಂತ್ರಿಯಾಗುವುದು ನಿಶ್ಚಿತ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೊಮ್ಮೆ ಆಡಳಿತ ಚುಕ್ಕಾಣಿ ಹಿಡಿಯುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಅದೇ ರೀತಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಪ್ರಚಂಡ ಬಹುಮತದಿಂದ ಆರಿಸಿ ಬರುತ್ತಾರೆ. ಅದರಲ್ಲಿ ಯಾವುದೇ ಸಂಶಯ ಬೇಡ, ಬಸವರಾಜ ಬೊಮ್ಮಾಯಿ ಅವರು ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುವ ಮೂಲಕ ಈ ಕ್ಷೇತ್ರವನ್ನು ಮಾದರಿ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.ಬಿಜೆಪಿ ಶಿರಹಟ್ಟಿ ಮಂಡಲದ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ತಾಲೂಕು ಪ್ರಧಾನ ಕಾರ್ಯದರ್ಶಿ ಅನಿಲ ಮುಳಗುಂದ, ಪ್ರವೀಣ ಪಾಟೀಲ, ನಗರ ಘಟಕದ ಅಧ್ಯಕ್ಷ ನವೀನ ಬೆಳ್ಳಟ್ಟಿ, ಗಂಗಾಧರ ಮೆಣಸಿನಕಾಯಿ, ಬಸವರಾಜ ಚಕ್ರಸಾಲಿ, ಉಳುವೇಶ ಪಾಟೀಲ, ಸಂಗಮೇಶ ಬೆಳವಲಳಕೊಪ್ಪ, ನೀಲಪ್ಪ ಕರ್ಜಕಣ್ಣವರ, ಉಮೇಶ ಬೆಳವಿಗಿ, ನೀಲಪ್ಪ ಹತ್ತಿ, ಎಂ.ಆರ್. ಪಾಟೀಲ, ಮಂಜುನಾಥ ಗೊರವರ, ದುಂಡೇಶ ಕೋಟಗಿ, ಸಂತೋಷ ಜಾವೂರ, ವಿಶಾಲ ಬಟಗುರ್ಕಿ ಹಾಗೂ ರಮೇಶ ಹಾಳದೋಟದ, ಬಿಜೆಪಿ ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.