ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲಗಳಲ್ಲಿ ವಿಶೇಷ ಪೂಜೆ

| Published : Sep 20 2025, 01:00 AM IST

ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲಗಳಲ್ಲಿ ವಿಶೇಷ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುತ್ತಿರುವ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಅದೇ ರೀತಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿಯೂ ಮೋದಿಯವರ ಹುಟ್ಟಹಬ್ಬವನ್ನು ಬಿಜೆಪಿ ಮತ್ತು ಅವರ ಅಭಿಮಾನಿಗಳು ಆಚರಣೆ ಮಾಡಿದ್ದಾರೆ. ಬಿಜೆಪಿ ಮುಖಂಡ ಸಿ. ಆರ್.ಚಿದಾನಂದ್ ನೂರಾರು ಪಕ್ಷದ ಕಾರ್ಯಕರ್ತರು, ನೇತೃತ್ವದಲ್ಲಿ ಪಟ್ಟಣದ ೪೦ ಅಡಿ ಅಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೋದಿಯವರ ಹೆಸರಿನಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲಿ ಆಗಮಿಸಿದ ಕಾರ್ಯಕರ್ತರು ಮತ್ತು ಅವರ ಅಭಿಮಾನಿ ಫಲಹಾರ ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 75ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಸಿ.ಆರ್. ಚಿದಾನಂದ್ ನೇತೃತ್ವದಲ್ಲಿ ದೇವಾಲಯಗಳಲ್ಲಿ ಪೂಜೆ, ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ, ಮತ್ತು ಸಾರ್ವಜನಿಕರಿಗೆ ಅನ್ನದಾನ ನಡೆಸಲಾಯಿತು.

ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುತ್ತಿರುವ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಅದೇ ರೀತಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿಯೂ ಮೋದಿಯವರ ಹುಟ್ಟಹಬ್ಬವನ್ನು ಬಿಜೆಪಿ ಮತ್ತು ಅವರ ಅಭಿಮಾನಿಗಳು ಆಚರಣೆ ಮಾಡಿದ್ದಾರೆ. ಬಿಜೆಪಿ ಮುಖಂಡ ಸಿ. ಆರ್.ಚಿದಾನಂದ್ ನೂರಾರು ಪಕ್ಷದ ಕಾರ್ಯಕರ್ತರು, ನೇತೃತ್ವದಲ್ಲಿ ಪಟ್ಟಣದ ೪೦ ಅಡಿ ಅಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೋದಿಯವರ ಹೆಸರಿನಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲಿ ಆಗಮಿಸಿದ ಕಾರ್ಯಕರ್ತರು ಮತ್ತು ಅವರ ಅಭಿಮಾನಿ ಫಲಹಾರ ವಿತರಿಸಲಾಯಿತು.

ಮುಖಂಡ ಸಿ.ಆರ್.ಚಿದಾನಂದ್ ಮಾತನಾಡಿ, ದೇಶವನ್ನು ಜಾಗತಿಕ ಮಟ್ಟದಲ್ಲಿ ಅತ್ಯುನ್ನುತ ಮಟ್ಟಕ್ಕೆ ಕೊಂಡೊಯ್ಯುತ್ತಿರುವ ನರೇಂದ್ರ ಮೋದಿಯವರ ಹುಟ್ಟುಹಬ್ಬ ಆಚರಿಸುತ್ತಿರುವುದು ಅವರ ಅಭಿಮಾನಿಯಾಗಿ ನನಗೆ ಖುಷಿ ತಂದಿದೆ ಎಂದರು.

ಅನ್ನಸಂತರ್ಪಣೆ ಕಾರ್ಯದಲ್ಲಿ ಗಣಪತಿ ಸೇವಾಸಮಿತಿ ಕಾರ್ಯದರ್ಶಿ ಸತ್ಯನಾರಾಯಣ್, ಮುಖಂಡರಾದ ತಾಲೂಕು ಗಂಗಾಧರ್, ಪ್ರಧಾನ ಕಾರ್ಯದರ್ಶಿ ಧರಣೇಶ್, ನಂಜುಂಡ ಮೈಮ್, ಜಗದೀಶ್‌ ಕೆರೆಬೀದಿ, ರಂಗೇಗೌಡ, ರೂಪೇಶ್, ವಿಶ್ವನಾಥ್, ಮಂಜುನಾಥ್ ಗುಂಡಶೆಟ್ಟಿಹಳ್ಳಿ, ಬಸವ, ಅಶೋಕ್, ಕಾರ್ತಿಕ್, ಎ.ಆರ್.ನಾಗರಾಜ್ ಮತ್ತಿತರಿದ್ದರು.