ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಮಕ್ಕಳ ಕ್ರೀಡಾ ಕೂಟದಲ್ಲಿ ಇಲ್ಲಿನ ಅಯ್ಯಪ್ಪನಗರ ವಿಜೇತ ವಿಶೇಷ ಶಾಲಾ ಮಕ್ಕಳು ಭಾಗವಹಿಸಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದ್ದಾರೆ ಮತ್ತು ವಿಶೇಷವಾಗಿ ಆಯೋಜಿಸಲಾಗಿದ್ದ ಪಥ ಸಂಚಲನದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.

ಕಾರ್ಕಳ: ಮಂಗಳೂರು ವಿಶ್ವವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಡಾ.ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜು ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಗಳ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಮಕ್ಕಳ ಕ್ರೀಡಾ ಕೂಟದಲ್ಲಿ ಇಲ್ಲಿನ ಅಯ್ಯಪ್ಪನಗರ ವಿಜೇತ ವಿಶೇಷ ಶಾಲಾ ಮಕ್ಕಳು ಭಾಗವಹಿಸಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದ್ದಾರೆ ಮತ್ತು ವಿಶೇಷವಾಗಿ ಆಯೋಜಿಸಲಾಗಿದ್ದ ಪಥ ಸಂಚಲನದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.

ಸಮರೋಪ ಸಮಾರಂಭದಲ್ಲಿ ಮುಂಬೈ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಬಹುಮಾನಗಳನ್ನು ವಿತರಿಸಿದರು, ಮಹಿಳಾ ಕಾಲೇಜಿನ ಪ್ರಾಂಶುಪಾಲ ಸೋಜನ್, ನಗರಸಭಾ ಸದಸ್ಯ ವಿಜಯ ಕೊಡವೂರು, ಕಾಲೇಜಿನ ಕ್ರೀಡಾ ನಿರ್ದೇಶಕ ರಾಮಚಂದ್ರ ಪಾಟ್ಕರ್, ದೈಹಿಕ ಶಿಕ್ಷಕ ರಾಜೇಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ನಿರ್ದೇಶಕಿ ಅಲೀಮಾ ಉಪಸ್ಥಿತರಿದ್ದರು.

ವಿಜೇತ ವಿಶೇಷ ಶಾಲೆಯಿಂದ ಒಟ್ಟು ೪೮ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, 30 ಚಿನ್ನದ ಪದಕ, 18 ಬೆಳ್ಳಿ ಪದಕ, 15 ಕಂಚಿನ ಪದಕಗಳು ಸೇರಿ ಒಟ್ಟು ೬೩ ಪದಕಗಳನ್ನು ಗಳಿಸಿರುತ್ತಾರೆ.

ಈ ಸಮಗ್ರ ಸಾಧನೆಯೊಂದಿಗೆ ಶಾಲೆಗೆ ಕೀರ್ತಿ ತಂದ ವಿಜೇತ ಶಾಲೆಯ ಹೆಮ್ಮೆಯ ಮಕ್ಕಳಿಗೆ ಪ್ರಾಂಶುಪಾಲೆ ಡಾ. ಕಾಂತಿ ಹರೀಶ್, ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದದವರು ಅಭಿನಂದನೆ ಸಲ್ಲಿಸಿದ್ದಾರೆ.