ವಿಜಯಪುರ: ಜಿಲ್ಲೆಯಲ್ಲಿನ ನಕಲಿ ವೈದ್ಯರು ಮತ್ತು ಕೆಪಿಎಂಇ ಕಾಯ್ದೆಯಡಿ ನೋಂದಣಿಗೊಳ್ಳದೇ ಅನಧಿಕೃತವಾಗಿ ಖಾಸಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ವಿಶೇಷ ಪಡೆ ರಚಿಸಲಾಗಿದೆ ಎಂದು ರಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ಸರ್ಕಾರದ ಸುತ್ತೋಲೆಯ ಆದೇಶದಂತೆ ಈ ಪಡೆ ರಚಿಸಲಾಗಿದೆ ಎಂದವರು ತಿಳಿಸಿದ್ದಾರೆ. ಈ ಪಡೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ವಿಜಯಪುರ ನಗರ ಮತ್ತು ಗ್ರಾಮೀಣ, ಇಂಡಿ ಹಾಗೂ ಬಸವನಬಾಗೇವಾಡಿ ಉಪ ಪೋಲಿಸ್ ಅಧೀಕ್ಷಕರು, ಆಯಾ ತಾಲೂಕಿನ ತಹಸೀಲ್ದಾರರು, ಜಿಲ್ಲಾ ಆಯುಷ ಅಧಿಕಾರಿಗಳು, ಆಯಾ ತಾಲೂಕು ಆರೋಗ್ಯಾಧಿಕಾರಿಗಳು ವಶೇಷ ಪಡೆಯ ಸದಸ್ಯರಾಗಿದ್ದಾರೆ. ಜತೆಗೆ ಮಹ್ಮದಗೌಸ ಹವಾಲ್ದಾರ, ಪೀಟರ್ ಅಲೆಕ್ಸಾಂಡರ್, ಜಿಲ್ಲಾ ಹಂತದಲ್ಲಿ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ. ಜಿಲ್ಲೆಗೆ ಸಂಬಂಧಿಸಿದ ಒಟ್ಟು 24 ನಕಲಿ ವೈದ್ಯರಿಗೆ 25000 ರೂ. ಗಳ ದಂಡ ವಿಧಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ನಕಲಿ ವೈದ್ಯರು ಜಿಲ್ಲಾ ಕೆ.ಪಿ.ಎಂ.ಇ ಕಮಿಟಿ ಬ್ಯಾಂಕ್ ಖಾತೆಗೆ ಜಮೆ ಮಾಡಲು ಸೂಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.