ಸಾರಾಂಶ
ಬೆಂಗಳೂರು : ದೀಪಾವಳಿ ಹಬ್ಬದಂದು ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ನೈಋತ್ಯ ರೈಲ್ವೆಯು 2 ಟ್ರಿಪ್ ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ.
ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್‌ಪ್ರೆಸ್ ರೈಲು (06533) ಅ.30 ಮತ್ತು ನ.2 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದೆ. ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.
ಹಿಂದಿರುಗುವ ರೈಲು (06534) ಕಲಬುರಗಿಯಿಂದ ಅ. 31 ಮತ್ತು ನ. 3ರಂದು ಬೆಳಗ್ಗೆ 9.30ಕ್ಕೆ ಹೊರಡಲಿದ್ದು, ಅದೇ ದಿನ ರಾತ್ರಿ 8 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
12 ಜನರಲ್ ಸೆಕೆಂಡ್ ಕ್ಲಾಸ್, 3 ಸ್ಲೀಪರ್ ಕ್ಲಾಸ್, 2 ಎಸಿ ತ್ರಿ ಟೈಯರ್, 1 ಲಗೇಜ್ / ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರ್ ಮತ್ತು 1 ಎಸ್ಎಲ್ಆರ್ ಡಿ ಸೇರಿ 19 ಬೋಗಿಗಳು ಇರಲಿವೆ ಎಂದು ಪ್ರಕಟಣೆ ತಿಳಿಸಿದೆ.