ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದೆ.

 ಬೆಂಗಳೂರು : ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದೆ. 

ಜುಲೈ 26 ಮತ್ತು 28ರಂದು ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್ ರೈಲು (06567) ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯರಾತ್ರಿ 12.30 ಗಂಟೆಗೆ ಹೊರಟು, ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06568) ಜುಲೈ 26 ಮತ್ತು 28 ರಂದು ಕಾರವಾರ ನಿಲ್ದಾಣದಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಸಂಜೆ 3:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.