ದೀಪಾವಳಿಗೆ ಮಂಗ್ಳೂರು, ಹುಬ್ಬಳ್ಳಿ,ಬೆಳಗಾವಿಗೆ ವಿಶೇಷ ರೈಲು ಓಡಾಟ

| N/A | Published : Oct 14 2025, 01:00 AM IST / Updated: Oct 14 2025, 06:06 AM IST

Indian Railways launches 3 new train services for Aizawl  Delhi Kolkata Guwahati
ದೀಪಾವಳಿಗೆ ಮಂಗ್ಳೂರು, ಹುಬ್ಬಳ್ಳಿ,ಬೆಳಗಾವಿಗೆ ವಿಶೇಷ ರೈಲು ಓಡಾಟ
Share this Article
  • FB
  • TW
  • Linkdin
  • Email

ಸಾರಾಂಶ

ದೀಪಾವಳಿ ಪ್ರಯಾಣಿಕರ  ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ. ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್‌ (06229) ರೈಲು ಅ.19 ರಂದು ತಡರಾತ್ರಿ 12.15 ಗಂಟೆಗೆ ಯಶವಂತಪುರದಿಂದ ಹೊರಟು, ಬೆಳಗ್ಗೆ 11.15 ಗಂಟೆಗೆ ಮಂಗಳೂರು ತಲುಪಲಿದೆ.

  ಬೆಂಗಳೂರು :  ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ.

ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್‌ (06229) ರೈಲು ಅ.19 ರಂದು ತಡರಾತ್ರಿ 12.15 ಗಂಟೆಗೆ ಯಶವಂತಪುರದಿಂದ ಹೊರಟು, ಬೆಳಗ್ಗೆ 11.15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ವಾಪಸಾಗುವ ರೈಲು (06230) ಅ.19 ರಂದು ಮಧ್ಯಾಹ್ನ 2.35 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ತಡರಾತ್ರಿ 12.30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಎಸ್ಎಸ್ಎಸ್ ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ ರೈಲು (07353) ಅ.17 ರಂದು ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅ.8 ರಂದು 11.15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ.

ವಾಪಸಾಗುವ ರೈಲು (07354) ಅ.18 ರಂದು 2.35 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11.15 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್:

ರೈಲು (06507) ಅ.18 ರಂದು 8 ಗಂಟೆಗೆ ಬೆಳಗಾವಿಯಿಂದ ಹೊರಟು ರಾತ್ರಿ 7.45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂದಿರುಗುವ ರೈಲು (06508) ಅ.18 ರಂದು ರಾತ್ರಿ 9 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಅ.19 ರಂದು ಬೆಳಗ್ಗೆ 8.35 ಗಂಟೆಗೆ ಬೆಳಗಾವಿ ತಲುಪಲಿದೆ.

ಈ ರೈಲು ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರದಲ್ಲಿ ನಿಲ್ಲಲಿದೆ ಎಂದು ಪ್ರಕಟಣೆ ತಿಳಿಸಿದೆ.

Read more Articles on