ಸಾರಾಂಶ
ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು.
ಮಡಿಕೇರಿ : ಮಕ್ಕಳ ವಿಶೇಷ ಪೊಲೀಸ್ ಘಟಕ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದೊಂದಿಗೆ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯ ರೋಹಿತ್ ಸಿ.ಜೆ.ರವರು ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆಗಳು, ಮಕ್ಕಳ ಹಕ್ಕುಗಳು ಮತ್ತು ಇತರೆ ಕಾನೂನು ಪ್ರಕ್ರಿಯೆಗಳ ಬಗ್ಗೆ ತರಬೇತಿ ನೀಡಿದರು. ಈ ಸಂದರ್ಭ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.--------------------------
ಇಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯಮಡಿಕೇರಿ: ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಫೆ. 20 ರಂದು ದೇವಾಲಯದ ಸ್ವಚ್ಛತೆ ಕಾರ್ಯ ಹಾಗೂ ಗರ್ಭಗುಡಿಗೆ ಸುಣ್ಣ ಬಣ್ಣ ಬಳಿಯುವ ಕಾರ್ಯ ಇರುವುದರಿಂದ ಮಧ್ಯಾಹ್ನ 12 ಗಂಟೆಯ ಮಹಾಪೂಜೆ ನಂತರ ಹಾಗೂ ಸಂಜೆ ಸಾರ್ವಜನಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು ತಿಳಿಸಿದ್ದಾರೆ.----------------------------
ಇಂದು ಕವಿ ಸರ್ವಜ್ಞ ಜಯಂತಿಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಫೆ. 20 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್‌ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಜಿಲ್ಲಾ ಕುಲಾಲ ಕುಂಬಾರ ಸಂಘದ ಅಧ್ಯಕ್ಷರಾದ ಕೆ.ಕುಶಾಲಪ್ಪ ಮೂಲ್ಯ, ಉಪಾಧ್ಯಕ್ಷರಾದ ದಾಮೋದರ್, ಜ್ಞಾನ ಕಾವೇರಿ ಕೊಡಗು ವಿಶ್ವ ವಿದ್ಯಾಲಯದ ಕನ್ನಡ ಅಧ್ಯಾಪಕರಾದ ಡಾ.ಜಮೀರ್ ಅಹಮದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.