ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ

| Published : Jul 16 2025, 12:45 AM IST

ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ನಗರದ ಪ್ರಧಾನ‌ ದೇವತೆ ಶ್ರೀ ಚಾಮುಂಡೇಶ್ವರಿ ‌ಅಮ್ಮ, ಕೊಂಕಾಣಿದೊಡ್ಡಿ ಆದಿಶಕ್ತಿ, ಬಾಲಗೇರಿ ಬಿಸಿಲು ಮಾರಮ್ಮ, ಭಂಡಾರಮ್ಮ, ಮಗ್ಗದ ಕೇರಿ ಮಾರಮ್ಮ ದೇವಾಲಯಗಳಲ್ಲಿ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಪೂಜೆ ಸಲ್ಲಿಸಿದರು.

ರಾಮನಗರ: ನಗರದ ಪ್ರಧಾನ‌ ದೇವತೆ ಶ್ರೀ ಚಾಮುಂಡೇಶ್ವರಿ ‌ಅಮ್ಮ, ಕೊಂಕಾಣಿದೊಡ್ಡಿ ಆದಿಶಕ್ತಿ, ಬಾಲಗೇರಿ ಬಿಸಿಲು ಮಾರಮ್ಮ, ಭಂಡಾರಮ್ಮ, ಮಗ್ಗದ ಕೇರಿ ಮಾರಮ್ಮ ದೇವಾಲಯಗಳಲ್ಲಿ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ನಗರದಲ್ಲಿ ಒಂಬತ್ತು ಕರಗಗಳು ಒಂದೇ ಬಾರಿ ನಡೆಯುವುದು ವಿಶೇಷ, ಆಷಾಡ ಮಾಸದಲ್ಲಿ ಕರಗ ಮಹೋತ್ಸವ ನಡೆಯುವು ದರಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ. ನಾನು ಪ್ರತಿವರ್ಷದಂತೆ ಮುಖಂಡರೊಡಗೂಡಿ ಪೂಜೆ ಸಲ್ಲಿಸಿ ನಗರದ ಜನರಲ್ಲಿ ಸುಖ ಶಾಂತಿ‌ ನೆಮ್ಮದಿ ಕರುಣಿಸಲಿ ಹಾಗೂ ಮಳೆ ಬೆಳೆ ಆಗಲಿ ಎಂದು ದೇವತೆಗಳಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು‌.

ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಶ್ರೀನಿವಾಸ್, ಟಿಎಪಿಸಿಎಂಎಸ್ ನಿರ್ದೇಶಕ ಶ್ರೀನಿವಾಸ್,ಎಂಪಿಸಿಎಸ್ ಕಾರ್ಯದರ್ಶಿ ಡೈರಿ ವೆಂಕಟೇಶ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಮುಖಂಡರಾದ ಬಾಲಗೇರಿ ಪ್ರಭು, ವಕೀಲ ವಿನಯ್, ಕಬಡ್ಡಿ ವಿಜಿ ಮತ್ತಿತರರು ಹಾಜರಿದ್ದರು.15ಕೆಆರ್ ಎಂಎನ್ 4.ಜೆಪಿಜಿ

ರಾಮನಗರ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಕೊಂಕಾಣಿದೊಡ್ಡಿ ಆದಿಶಕ್ತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.