ಸಾರಾಂಶ
ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ಹೆಚ್ಚು ಜನರು ಗ್ಯಾಲರಿಯಲ್ಲಿ ಕುಳಿತಿದ್ದ ಹಿನ್ನೆಲೆಯಲ್ಲಿ ವೀಕ್ಷಣಾ ಗ್ಯಾಲರಿ ಕುಸಿದಿದ್ದರಿಂದ ಗ್ರಾಮದ ಪಾಪಣ್ಣಚಾರಿ (50) ಸ್ಥಳದಲ್ಲಿ ಮೃತಪಟ್ಟರು.
ಮಂಡ್ಯ: ಕಬಡ್ಡಿ ಪಂದ್ಯ ನಡೆಯುವ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಮೃತಪಟ್ಟು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ಹೆಚ್ಚು ಜನರು ಗ್ಯಾಲರಿಯಲ್ಲಿ ಕುಳಿತಿದ್ದ ಹಿನ್ನೆಲೆಯಲ್ಲಿ ವೀಕ್ಷಣಾ ಗ್ಯಾಲರಿ ಕುಸಿದಿದ್ದರಿಂದ ಗ್ರಾಮದ ಪಾಪಣ್ಣಚಾರಿ (50) ಸ್ಥಳದಲ್ಲಿ ಮೃತಪಟ್ಟರು. ಮಕ್ಕಳು ಸೇರಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಮಂಡ್ಯ ಮಿಮ್ಸ್ ಸೇರಿ ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತನ ಕಡೆಯವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟತ್ತು.