ಸ್ಪೀಚ್ ಆ್ಯಂಡ್ ಹಿಯರಿಂಗ್ ಕಾಲೇಜು ಶೀಘ್ರದಲ್ಲೇ ಆರಂಭ: ಡಾ.ಚರಂತಿಮಠ

| Published : Feb 06 2025, 12:18 AM IST

ಸ್ಪೀಚ್ ಆ್ಯಂಡ್ ಹಿಯರಿಂಗ್ ಕಾಲೇಜು ಶೀಘ್ರದಲ್ಲೇ ಆರಂಭ: ಡಾ.ಚರಂತಿಮಠ
Share this Article
  • FB
  • TW
  • Linkdin
  • Email

ಸಾರಾಂಶ

ಮೆಡಿಕಲ್ ಕಾಲೇಜಿನ ಆವರಣದಲ್ಲಿ ನಾಲ್ಕು ಕಾಲೇಜು ಸ್ಥಾಪನೆಗೊಂಡಿದ್ದು, ಶೀಘ್ರದಲ್ಲೇ ಸ್ಪೀಚ್ ಆ್ಯಂಡ್ ಹಿಯರಿಂಗ್ ಕಾಲೇಜು ಕೂಡ ಆರಂಭಗೊಳ್ಳಲಿದೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವಿದ್ಯಾರ್ಥಿಗಳ ವಸತಿ ಮತ್ತು ವ್ಯಾಸಂಗಕ್ಕೆ ಅಗತ್ಯ ಸೌಲಭ್ಯಗಳುಳ್ಳ ಸುಜ್ಜಿತ ವಸತಿನಿಲಯ ಸ್ಥಾಪಿಸಲಾಗುತ್ತಿದೆ. ಅತ್ಯುತ್ತಮ ವಸತಿ ಮತ್ತು ಊಟದ ಸೌಲಭ್ಯ ಒದಗಿಸುವುದರ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ಕೃಷ್ಟತೆ ಸಾಧಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.

ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯರ ಮತ್ತು ವಿದ್ಯಾರ್ಥಿಗಳ ನೂತನ ವಸತಿ ನಿಲಯಗಳ ಸ್ಥಾಪನೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, 65 ಸಾವಿರ ಚದರಡಿ ವಿಸ್ತೀರ್ಣದಲ್ಲಿ ₹11.05 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿಗಳ ವಸತಿನಿಲಯ ಮತ್ತು 60 ಸಾವಿರ ಚದರಡಿ ವಿಸ್ತೀರ್ಣದಲ್ಲಿ ₹10.20 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರ ವಸತಿನಿಲಯ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಮೆಡಿಕಲ್ ಕಾಲೇಜಿನ ಆವರಣದಲ್ಲಿ ನಾಲ್ಕು ಕಾಲೇಜು ಸ್ಥಾಪನೆಗೊಂಡಿದ್ದು, ಶೀಘ್ರದಲ್ಲೇ ಸ್ಪೀಚ್ ಆ್ಯಂಡ್ ಹಿಯರಿಂಗ್ ಕಾಲೇಜು ಕೂಡ ಆರಂಭಗೊಳ್ಳಲಿದೆ. ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ಪ್ರವೇಶಪಡೆದು ಶಿಕ್ಷಣ ಪಡೆಯುತ್ತಿರುವರು. ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗೆ ಪ್ರವೇಶ ಮಾತ್ರವಲ್ಲದೆ ವಸತಿ ಸೌಲಭ್ಯ ಕೂಡ ಒದಗಿಸಬೇಕು. ಈ ಕಾರಣದಿಂದ ಅತ್ಯುತ್ತಮ ಸೌಲಭ್ಯದ ವಿದ್ಯಾರ್ಥಿ ನಿಲಯ ಸ್ಥಾಪಿಸಲಾಗಿದೆ. ಒಟ್ಟಾರೆ ಬಿವಿವಿ ಸಂಘದ ವಿದ್ಯಾರ್ಥಿ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪೂರಕವಾದ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಹಾಸ್ಟೆಲ್ ಕಮಿಟಿ ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಹಿರೇಮಠ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ, ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ಸಂಘದ ಸದಸ್ಯರು, ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಮತ್ತು ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.