ಹೆಚ್ಚು ಯಂತ್ರ - ಕಾರ್ಮಿಕರನ್ನು ಬಳಸಿ ರಾಹೆ ಕಾಮಗಾರಿ ತ್ವರಿತಗೊಳಿಸಿ: ಕೋಟ ಶ್ರೀನಿವಾಸ ಪೂಜಾರಿ

| Published : Jun 13 2024, 12:53 AM IST

ಹೆಚ್ಚು ಯಂತ್ರ - ಕಾರ್ಮಿಕರನ್ನು ಬಳಸಿ ರಾಹೆ ಕಾಮಗಾರಿ ತ್ವರಿತಗೊಳಿಸಿ: ಕೋಟ ಶ್ರೀನಿವಾಸ ಪೂಜಾರಿ
Share this Article
  • FB
  • TW
  • Linkdin
  • Email

ಸಾರಾಂಶ

ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನೂತನ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ಆಧುನಿಕ ತಂತ್ರಜ್ಞಾನ - ಯಂತ್ರಗಳನ್ನು ಬಳಸಿ, ಹೆಚ್ಚು ಕಾರ್ಮಿಕರನ್ನು ನಿಯೋಜಿಸಿ ತ್ವರಿತವಾಗಿ ಕಾಮಗಾರಿಗಳನ್ನು ಆದ್ಯತೆಯಲ್ಲಿ ಪೂರ್ಣಗೊಳಿಸಬೇಕು ಎಂದು ನೂತನ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಸಂತ ಕಟ್ಟೆ ಅಂಡರ್‌ಪಾಸ್, ಇಂದ್ರಾಳಿ ಸೇತುವೆ, ಕರಾವಳಿ ಜಂಕ್ಷನ್‌ - ಮಲ್ಪೆ ರಸ್ತೆ, ಪರ್ಕಳ - ಆಗುಂಬೆವರೆಗಿನ ರಾಹೆ ಕಾಮಗಾರಿಗಳು ಮಂದಗತಿಯಲ್ಲಿವೆ. ಸಂತೆಕಟ್ಟೆಯ ಬಳಿ ದಿನಕ್ಕೆ 10 ಮೀಟರ್ ಕಾಮಗಾರಿಯೂ ಆಗುತ್ತಿಲ್ಲ. ಇದರಿಂದ ತೊಂದರೆಗೊಳಗಾದ ಸಾರ್ವಜನಿಕರಿಂದ ದೂರು ಬರುತ್ತಿದೆ. ಕಾಮಗಾರಿಯ ವೇಗವಾಗಿ, ಅಲ್ಪ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಕರಾವಳಿ ಬೈಪಾಸ್ - ಮಲ್ಪೆ ರಾಹೆ ನಿರ್ಮಾಣಕ್ಕೆ ಆಗತ್ಯ ಭೂಮಿಯನ್ನು ತಕ್ಷಣ ಸ್ವಾಧೀನ ಪಡಿಸಿಕೊಳ್ಳಿ. ಭೂ ಮಾಲೀಕರಿಗೆ ಮಾರುಕಟ್ಟೆ ಮೌಲ್ಯದ ಪರಿಹಾರ ನೀಡಿ ಎಂದರು.

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ನಾಲ್ಕು ವರ್ಷವಾದರೂ ಪೂರ್ಣಗೊಳ್ಳದ ಬಗ್ಗೆ ಸಾರ್ವಜನಿಕರಿಗೆ ಬೇಸರ ಉಂಟಾಗಿದೆ. ಈ ಕಾಮಗಾರಿಯನ್ನು ಸಹ ಆದ್ಯತೆ ಮೇಲೆ ಕೈಗೊಳ್ಳಬೇಕು. ಸಾಧ್ಯವಾದಷ್ಟು ಶೀಘ್ರದಲ್ಲೆ ಪೂರ್ಣಗೊಳಿಸಲು ಮುಂದಾಗಬೇಕು ಎಂದರು.

ಸಭೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ರಶ್ಮಿ, ನಗರಸಭಾ ಸದಸ್ಯರಾದ ಗಿರೀಶ್ ಕಾಂಚನ್ ಹಾಗೂ ಸುಂದರ್ ಜೆ ಕಲ್ಮಾಡಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.