ಶೀಘ್ರ ಶಿವಗಂಗೆ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿ: ಶಾಸಕ ಎನ್.ಶ್ರೀನಿವಾಸ್ ಭರವಸೆ

| Published : Dec 30 2024, 01:04 AM IST

ಶೀಘ್ರ ಶಿವಗಂಗೆ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿ: ಶಾಸಕ ಎನ್.ಶ್ರೀನಿವಾಸ್ ಭರವಸೆ
Share this Article
  • FB
  • TW
  • Linkdin
  • Email

ಸಾರಾಂಶ

ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ರಸ್ತೆಯನ್ನು ಕೆ.ಆರ್.ಡಿ.ಎಲ್.ಗೆ ಹಸ್ತಾಂತರಿಸಿದ್ದೇವೆ, ಮರು ಡಾಂಬರೀಕರಣವಾಗಿ ನಿರ್ವಹಣೆಯಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದುವರೆಗೂ ಈ ಶಿವಗಂಗೆ- ಲಕ್ಕೂರು ರಸ್ತೆ ನಿರ್ಮಾಣದ ಬಗ್ಗೆ ಎಸ್.ಟಿ.ಆರ್.ಆರ್.ಯೋಜನೆಯಲ್ಲಿ ಉಲ್ಲೇಖಿಸಿಲ್ಲ ಎಂದು ಸಚಿವರಿಗೆ ಸ್ಪಷ್ಟಪಡಿಸಿದ್ದೇನೆ.

ದಾಬಸ್‍ಪೇಟೆ: ಶಿವಗಂಗೆಯಿಂದ ದಾಬಸ್‍ಪೇಟೆಯವರೆಗೆ ಸಂಚಾರ ದಟ್ಟಣೆ ಹೆಚ್ಚಾದ ಪರಿಣಾಮ ಈಗಿರುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸುವಂತೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಚರ್ಚಿಸಿ, ಲೋಕೋಪಯೋಗಿ ಸಚಿವರಿಗೆ ಮನವಿ ಮಾಡಿದ್ದು, ಈ ಬಗ್ಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಇಡೀ ರಾಜ್ಯದಲ್ಲೇ ದಕ್ಷಿಣಕಾಶಿ ಎಂದು ಪ್ರಸಿದ್ಧವಾಗಿರುವ ಶಿವಗಂಗೆ ಬೆಟ್ಟಕ್ಕೆ ದೇವರ ದರ್ಶನ ಪಡೆಯಲು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು, ಭಕ್ತರು ಆಗಮಿಸುತ್ತಾರೆ. ರಸ್ತೆ ಕಿರಿದಾಗಿದ್ದು ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಹಾಗಾಗಿ ಈ ರಸ್ತೆ ನಿರ್ಮಾಣಕ್ಕೆ ಸುಮಾರು 25 ಕೋಟಿ ರು. ಖರ್ಚಾಗಬಹುದಾಗಿದೆ ಎಂದರು.

ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ರಸ್ತೆಯನ್ನು ಕೆ.ಆರ್.ಡಿ.ಎಲ್.ಗೆ ಹಸ್ತಾಂತರಿಸಿದ್ದೇವೆ, ಮರು ಡಾಂಬರೀಕರಣವಾಗಿ ನಿರ್ವಹಣೆಯಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದುವರೆಗೂ ಈ ಶಿವಗಂಗೆ- ಲಕ್ಕೂರು ರಸ್ತೆ ನಿರ್ಮಾಣದ ಬಗ್ಗೆ ಎಸ್.ಟಿ.ಆರ್.ಆರ್.ಯೋಜನೆಯಲ್ಲಿ ಉಲ್ಲೇಖಿಸಿಲ್ಲ ಎಂದು ಸಚಿವರಿಗೆ ಸ್ಪಷ್ಟಪಡಿಸಿದ್ದೇನೆ ಎಂದರು.

ನಾನು ಕ್ಷೇತ್ರ ಪ್ರವಾಸ ಕೈಗೊಂಡಾಗ ಶಿವಗಂಗೆ, ಬರಗೇನಹಳ್ಳಿ, ಹೊನ್ನೇನಹಳ್ಳಿ, ದಾಬಸ್‍ಪೇಟೆ ಜನತೆ ಸಂಚಾರ ದಟ್ಟಣೆಯ ಬಗ್ಗೆ ಗಮನಕ್ಕೆ ತಂದು ಚತುಷ್ಪಥ ರಸ್ತೆ ನಿರ್ಮಿಸುವಂತೆ ಮನವಿ ಮಾಡಿದ್ದರು. ನಾನು ಸಹ ಮುಖಂಡರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ, ಇದೀಗ ಲೋಕೋಪಯೋಗಿ ಸಚಿವರು ಗಮನಕ್ಕೆ ತಂದಿದ್ದು, ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.