ಬದುಕಿನಲ್ಲಿ ಆಧ್ಯಾತ್ಮಿಕ ಸಮಯದ ಅಗತ್ಯವಿದೆ: ಅದಮಾರು ಶ್ರೀ

| Published : May 24 2025, 12:33 AM IST

ಸಾರಾಂಶ

ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇದರ ಕಾಲೇಜು ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇದರ ಕಾಲೇಜು ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಬದುಕಿನಲ್ಲಿ ಆಧ್ಯಾತ್ಮಿಕ ಸಮಯದ ಅಗತ್ಯವಿದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಕಚೇರಿ ಜಂಟಿ ನಿರ್ದೇಶಕ ಡಾ. ಕವಿತಾ ಕೆ.ಆರ್. ಉಪಸ್ಥಿತರಿದ್ದರು. ಪೂರ್ಣಪ್ರಜ್ಞ ಕಾಲೇಜಿನ ಗೌರವ ಕಾರ್ಯದರ್ಶಿಗಳಾದ ಡಾ. ಜಿ.ಎಸ್.ಚಂದ್ರಶೇಖರ್ ಸ್ವಾಗತಿಸಿದರು. ಕಾಲೇಜು ಆಡಳಿತ ಮಂಡಳಿ ಕೋಶಾಧಿಕಾರಿ ಸಿಎ ಪ್ರಶಾಂತ್ ಹೊಳ್ಳ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು. ಪ್ರಾಂಶುಪಾಲರಾದ ಡಾ. ರಾಮು ಎಲ್. ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು.ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ. ಬಾಲಕೃಷ್ಣ ಭಾರದ್ವಜ, ಬಹುಮಾನ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ರ್‍ಯಾಂಕ್ ಗಳಿಸಿದವರನ್ನು ಹಾಗೆಯೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎನ್‌ಸಿಸಿ ಹಾಗೂ ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ಟಿ.ಎಸ್.ರಮೇಶ್ ವಂದಿಸಿದರು. ವಿದ್ಯಾರ್ಥಿ ಜಯಲಕ್ಷ್ಮೀ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಕ್ಷತಾ ನಾಯಕ್, ಮಂಜುನಾಥ ನಾವಡ, ಛಾಯಾ, ಸತ್ಯವ್ವ, ರಚನ್ ಪದ್ಮಶಾಲಿ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಪೃಥ್ವಿ ಮತ್ತು ಮಾಣಿಕ್ಯ ಪ್ರಾರ್ಥಿಸಿದರು.