ಮುಂಗಾರು ಹಾಗೂ ಹಿಂಗಾರು ಮಳೆ ಸಮರ್ಪಕವಾಗಿ ಆಗದಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ರೈತರು ಲಭ್ಯವಿರುವ ನೀರನ್ನು ಹಿತಮಿತವಾಗಿ ಬಳಕೆ ಮಾಡಬೇಕು. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು, ಸಮಸ್ಯೆ ಬಗೆಹರಿಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ತಹಸೀಲ್ದಾರ್‌ ಶಂಕರಪ್ಪ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವುದರಿಂದ ಆರೋಗ್ಯವಂತರಾಗಿ ಉನ್ನತ ಶಿಕ್ಷಣ ಪಡೆದು ಉದ್ಯೋಗವಂತರಾಗುತ್ತಾರೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುವುದರ ಜೊತೆಗೆ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳು ಸ್ಫೂರ್ತಿ ನೀಡುತ್ತವೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ನುಗ್ಗೇಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಾದ ಎ. ಬೆಳಗುಲಿ ಮತ್ತು ಕಗ್ಗೆರೆ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಓದಿನ ಜೊತೆಗೆ ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಬೆಳೆಸಬೇಕು. ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿದೆ. ಗ್ರಾಮೀಣ ಭಾಗದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಶಿಕ್ಷಕರು ಪ್ರತಿನಿತ್ಯ ಕ್ರೀಡಾಭ್ಯಾಸಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ತಾಲೂಕಿನಲ್ಲಿ ನುಗ್ಗೇಹಳ್ಳಿ, ಬಾಗೂರು, ಶ್ರವಣಬೆಳಗೊಳ, ಚನ್ನರಾಯಪಟ್ಟಣದಲ್ಲಿ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ನುಗ್ಗೇಹಳ್ಳಿ ಹೋಬಳಿ ಕಲೆ, ಸಾಹಿತ್ಯ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹಲವು ಸಾಧಕರನ್ನು ನೀಡಿದೆ. ನುಗ್ಗೇಹಳ್ಳಿ ಶಿವಪ್ಪ ಅವರು ಕಿರಿಯ ವಯಸ್ಸಿನಲ್ಲೇ ಎರಡು ಬಾರಿ ಸಂಸದರಾಗಿ ಹೆಸರು ಮಾಡಿದ್ದರು. ದ್ಯಾವಲಾಪುರದ ಪಟೇಲ್ ರಾಮಕೃಷ್ಣೇಗೌಡ ಅವರು ವಾಲಿಬಾಲ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು ಎಂದು ಸ್ಮರಿಸಿದರು.

ಮುಂಗಾರು ಹಾಗೂ ಹಿಂಗಾರು ಮಳೆ ಸಮರ್ಪಕವಾಗಿ ಆಗದಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ರೈತರು ಲಭ್ಯವಿರುವ ನೀರನ್ನು ಹಿತಮಿತವಾಗಿ ಬಳಕೆ ಮಾಡಬೇಕು. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು, ಸಮಸ್ಯೆ ಬಗೆಹರಿಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ತಹಸೀಲ್ದಾರ್‌ ಶಂಕರಪ್ಪ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವುದರಿಂದ ಆರೋಗ್ಯವಂತರಾಗಿ ಉನ್ನತ ಶಿಕ್ಷಣ ಪಡೆದು ಉದ್ಯೋಗವಂತರಾಗುತ್ತಾರೆ ಎಂದು ತಿಳಿಸಿದರು.

ನುಗ್ಗೇಹಳ್ಳಿ ಪುರವರ್ಗ ಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.ಕಾರ್ಯಕ್ರಮದಲ್ಲಿ ಉಪ ತಹಸೀಲ್ದಾರ್‌ ಪೂರ್ಣಿಮಾ, ಪ್ರಾಂಶುಪಾಲ ಟಿ .ಆರ್‌. ಸ್ವಾಮಿ, ವೈದ್ಯಾಧಿಕಾರಿ ಡಾ. ಸುಹಾಸ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸಿ. ಎನ್. ಗೋಪಾಲ್, ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಜಿ ದೇವೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಟಿ. ಆನಂದ್, ಕಂದಾಯ ನಿರೀಕ್ಷಕ ಲತೇಶ್ ಕುಮಾರ್, ಎಚ್. ಇ. ಮಂಜುನಾಥ್, ಸಂಪತ್ ಕುಮಾರ್‌, ಪಟೇಲ್ ಕುಮಾರ್, ಶಿಕ್ಷಕರ ಸಂಘದ ಗೌರವಾಧ್ಯಕ್ಷ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ರೇವಣ್ಣಸ್ವಾಮಿ, ನಿರ್ದೇಶಕರಾದ ಗೋಪಾಲಕೃಷ್ಣ, ಅಂತೋನಿ ಪ್ರಸಾದ್, ಪದ್ಮಮ್ಮ, ಪ್ರೇಮ ಮೇರಿ, ಶಿವಕುಮಾರ್, ಮಂಜುನಾಥಸ್ವಾಮಿ, ಎನ್. ಡಿ. ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.