ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ) ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಗುರುವಾರ ಇಲ್ಲಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಿತು.
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ) ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಗುರುವಾರ ಇಲ್ಲಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಿತು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ ಮತ್ತು ನೆಲಮಂಗಲ ತಾಲೂಕುಗಳ 800ಕ್ಕೂ ಹೆಚ್ಚು ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆ ಅನಾವರಣಗೊಳಿಸಿದರು.
ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಜಿ.ಮುರಳಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆ ಜೊತೆಯಲ್ಲಿ ಕ್ರೀಡೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡಾಗ ನಿಮ್ಮ ಮಾನಸಿಕ ಸದೃಢತೆಯ ಜೊತೆಯಲ್ಲಿ ದೈಹಿಕ ಸಬಲತೆ ಹೆಚ್ಚಾಗುತ್ತದೆ. ಕ್ರೀಡಾ ಪಟುಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದರೆ ಮುಂದಿನ ಉನ್ನತ ಶಿಕ್ಷಣದಲ್ಲಿ ನಿಮಗೆ ಶುಲ್ಕ ವಿನಾಯಿತಿ ದೊರೆಯುತ್ತದೆ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾ ಪಟುಗಳಿಗೆ ಹೆಚ್ಚಿನ ಆದ್ಯತೆಯ ಜೊತೆಗೆ ಮೀಸಲಾತಿಯು ಸಹ ದೊರೆಯುತ್ತದೆ. ವಿದ್ಯಾರ್ಥಿಗಳು ಇದರ ಸೌಲಭ್ಯ ಪಡೆಯಬಹುದು ಎಂದರುಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಗದಿಗೆಪ್ಪ ಬಿ ಹೊಸಮನಿ, ಜಿಲ್ಲೆಯ ನಾಲ್ಕು ತಾಲೂಕುಗಳ ಕ್ರೀಡಾ ಪಟುಗಳು ಭಾಗವಹಿಸಿದ್ದು, ಬಹುಮಾನ ಮುಖ್ಯವಲ್ಲ; ಭಾಗವಹಿಸುವಿಕೆ ಮುಖ್ಯ. ಆದುದರಿಂದ ಎಲ್ಲಾ ಕ್ರೀಡಾ ಪಟುಗಳು ಸೊಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಹಾಗೂ ತೀರ್ಪುಗಾರರು ಯಾವುದೇ ಒತ್ತಡಗಳಿಗೆ ಒಳಗಾಗದೆ ತೀರ್ಪುಗಳನ್ನು ಪ್ರಕಟಿಸಬೇಕು ಎಂದರು.
ವಿವಿಧ ಕಾಲೇಜುಗಳ ಪ್ರಾಂಶುಪಾಲರಾದ ಡಿ.ಎಸ್.ಸುನೀತಾ, ಎನ್.ಶ್ರೀನಿವಾಸ್, ಬಿ. ಆರ್. ವೇಣುಗೋಪಾಲ್, ಎಂ. ಸಿ. ಮಂಜುನಾಥ್, ಟಿ. ಆರ್. ಶ್ರೀರಾಮೇಗೌಡ, ಟಿ.ಕೆ ಬಾಲಕೃಷ್ಣ, ಶಶಾಂಕ್, ಕೇಶವಮೂರ್ತಿ, ಮುನಿರಾಜು, ಉಮೇಶ್ ಬಾವಿಕಟ್ಟಿ, ಶ್ರೀಧರ್, ರಾಮಯ್ಯ, ಕ್ರೀಡಾ ಕೂಟದ ಉಸ್ತುವಾರಿ ಉಪೇಂದ್ರ ರಾವ್, ದೈಹಿಕಶಿಕ್ಷಣ ನಿರ್ದೇಶಕರಾದ ದಾದಾಫೀರ್, ಶ್ರೀಕಾಂತ್, ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕ್ರೀಡಾಪಟುಗಳು ಬಾಗವಹಿಸಿದ್ದರು. ಶ್ರೀವಾಣಿ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.