ಆಲಸ್ಯದಿಂದ ಹೊರ ಬರಲು ಕ್ರೀಡಾ ಚಟುವಟಿಕೆ ಸಹಕಾರಿ: ಪ್ರಭಾಕರ ಪೂಜಾರಿ

| Published : Apr 03 2025, 12:31 AM IST

ಸಾರಾಂಶ

ಅಜ್ಜರಕಾಡು ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಕ್ರೀಡಾಕೂಟ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಅಜ್ಜರಕಾಡು ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಕ್ರೀಡಾಕೂಟ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.ಉಡುಪಿ ನಗರ ಸಭೆಯ ಅಧ್ಯಕ್ಷರು ಪ್ರಭಾಕರ ಪೂಜಾರಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆ, ನಮಗೆ ದೈಹಿಕ ವ್ಯಾಯಾಮದ ಜ್ಯೊತೆಗೆ ಮಾನಸಿಕ ಆರೋಗ್ಯವನ್ನು ನೀಡುತ್ತದೆ. ಮಾನಸಿಕ ಖಿನ್ನತೆ, ಒತ್ತಡ ಮತ್ತು ಆಲಸ್ಯದಿಂದ ಹೊರಬರಲು ಕ್ರೀಡೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ಉಡುಪಿ ಸಾಫಲ್ಯ ಟ್ರಸ್ಟ್ ಅಧ್ಯಕ್ಷ ಹರಿಣಾ ರಮೇಶ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ ಪ್ರಸಾದ್ ಕೆ. ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನ, ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ವಾಣಿಜ್ಯ ನಿಕಾಯದ ಡೀನ್ ಗೌರಿ ಎಸ್. ಭಟ್ ಮತ್ತು ಸಾಫಲ್ಯ ಟ್ರಸ್ಟ್ ನಿರ್ದೇಶಕಿ ನಿರೂಪಮಾ ಪ್ರಸಾದ್ ಉಪಸ್ಥಿತರಿದ್ದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಅತಿಥಿಗಳನ್ನು ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ ಕೆ. ಕಾರ್ಯಕ್ರ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಅವರು ವಂದಿಸಿದರು.