ಕ್ರೀಡೆ ಆರೋಗ್ಯದ ಒಂದು ಭಾಗ: ಜಿಲ್ಲಾಧಿಕಾರಿ ಮೀನಾ ನಾಗರಾಜ್‌

| Published : Apr 08 2025, 12:33 AM IST

ಕ್ರೀಡೆ ಆರೋಗ್ಯದ ಒಂದು ಭಾಗ: ಜಿಲ್ಲಾಧಿಕಾರಿ ಮೀನಾ ನಾಗರಾಜ್‌
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಕ್ರೀಡೆ ಆರೋಗ್ಯದ ಒಂದು ಭಾಗವಾಗಿದ್ದು, ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ - ಸಾಂಸ್ಕೃತಿಕ ಸ್ಪರ್ಧೆ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕ್ರೀಡೆ ಆರೋಗ್ಯದ ಒಂದು ಭಾಗವಾಗಿದ್ದು, ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಆರಂಭ ಗೊಂಡ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಾಜ್ಯ ಸರ್ಕಾರ ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡಲು ಅನೇಕ ಉಪಯುಕ್ತ ಕಾರ್ಯಕ್ರಮ ಜಾರಿಗೊಳಿಸಿದೆ. ನೌಕರರು ಕೆಲಸದ ಒತ್ತಡದಲ್ಲಿ ತಮ್ಮ ಕೌಟುಂಬಿಕ ಜೀವನ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಪ್ರತಿ ದಿನ ವ್ಯಾಯಾಮ, ನಡಿಗೆ, ಯೋಗ ಮಾಡಿ, ಫಿಟ್‌ನೆಸ್ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.ಪ್ರತಿಯೊಬ್ಬರೂ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಆರೋಗ್ಯ ಮುಖ್ಯ. ಉತ್ತಮ ಓದು, ವ್ಯಾಯಾಮ ಮನಸ್ಸಿಗೆ ಉಲ್ಲಾಸ, ವಿಶ್ರಾಂತಿ ನೀಡುತ್ತವೆ. ಖುಷಿಯಿಂದ ಕೆಲಸ ಮಾಡಲು ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಅಗತ್ಯವಿದೆ ಎಂದು ಹೇಳಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ಎಲ್ಲಾ ಇಲಾಖೆ ನೌಕರರನ್ನು ಒಟ್ಟುಗೂಡಿಸಿದ್ದು, ಈ ಕಾರ್ಯಕ್ರಮ ಸಮಾನತೆಯಿಂದ ಮೂಡಿ ಬಂದಿದೆ. ನಿರಂತರ ಯೋಗ, ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸುಸ್ಥಿತಿ ಕಾಪಾಡಲು ಸಹಾಯ ಮಾಡುತ್ತವೆ. ಪ್ರತಿ ದಿನ ಯೋಗ, ವಾಕಿಂಗ್ ಮಾಡಬೇಕು ಎಂದು ಹೇಳಿದರು.ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಎಂಬುದು ಇಲ್ಲ. ಗೆಲುವು ಸಿಗುತ್ತದೆ ಅಥವಾ ಆ ಕ್ರೀಡೆಯಿಂದ ಹೊಸದನ್ನು ಕಲಿಯುತ್ತೇವೆ. ಆದ್ದರಿಂದ ಗೆಲುವು ಅಥವಾ ಕಲಿಕೆ ಮಾತ್ರ ಕ್ರೀಡೆಯಿಂದ ಸಿಗುತ್ತದೆ. ಕ್ರೀಡೆಗಳು ಪರಸ್ಪರ ವೈಯಕ್ತಿಕ ಸಂಬಂಧ, ಸೌಹಾರ್ದತೆ, ಸಹೋದರತ್ವ ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಮಾತನಾಡಿ, ಕ್ರೀಡೆ ನಮ್ಮನ್ನು ಮಾನಸಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಆರೋಗ್ಯವಂತ ಜೀವನಕ್ಕೆ ಕ್ರೀಡೆ ಬಹುಮುಖ್ಯ. ಪ್ರಾಚೀನ ಕಾಲದಿಂದಲೂ ಕ್ರೀಡೆಗೆ ಮಹತ್ವ ಸ್ಥಾನ ನೀಡಲಾಗಿದೆ. ರಾಮಾಯಣ, ಮಹಾಭಾರತದ ಕಾಲದಲ್ಲಿ ರಾಜರು ಕ್ರೀಡಾಕೂಟ ಗಳನ್ನು ಏರ್ಪಡಿಸುತ್ತಿದ್ದರು. ಕುಸ್ತಿ, ಬಿಲ್ಲುಗಾರಿಕೆ ಮುಂತಾದವನ್ನು ಕಾಣಬಹುದಾಗಿದೆ ಎಂದರು.ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕಿ ಡಾ.ಎಚ್.ಪಿ. ಮಂಜುಳಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಬಿ,ಎನ್.ಸುಂದ್ರೇಶ್, ಕಾರ್ಯದರ್ಶಿ ಟಿ. ಪದ್ಮರಾಜ್, ಗೌರವಾಧ್ಯಕ್ಷ ಸಿ.ಎನ್.ಮಂಜುನಾಥ್, ಕೊಪ್ಪ ತಾಲೂಕು ಅಧ್ಯಕ್ಷ ರಾಘವೇಂದ್ರ ಹಾಗೂ ವಿವಿಧ ತಾಲೂಕು ಅಧ್ಯಕ್ಷರು ಉಪಸ್ಥಿತರಿದ್ದರು.

7 ಕೆಸಿಕೆಎಂ 2ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಮಾತನಾಡಿದರು.