ಮನುಷ್ಯನ ದೈನಂದಿನ ಚಟುವಟಿಕೆಗಳಲ್ಲಿ ಕ್ರೀಡೆಯು ಅತ್ಯಂತ ಪ್ರಮುಖ ಸ್ಥಾನ ಪಡೆದಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ
ಕನಕಗಿರಿ: ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಕ್ರೀಡೆಯೂ ಅತ್ಯವಶ್ಯವಾಗಿದೆ ಎಂದು ತಾಲೂಕಿನ ನವಲಿಯ ಪಿಯು ಕಾಲೇಜಿನ ಪ್ರಾಚಾರ್ಯ ಸುಭಾಷಚಂದ್ರ ಪಾಟೀಲ್ ಹೇಳಿದರು.
ಅವರು ತಾಲೂಕಿನ ನವಲಿ ಗ್ರಾಮದ ಪಿಯು ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು.ಮನುಷ್ಯನ ದೈನಂದಿನ ಚಟುವಟಿಕೆಗಳಲ್ಲಿ ಕ್ರೀಡೆಯು ಅತ್ಯಂತ ಪ್ರಮುಖ ಸ್ಥಾನ ಪಡೆದಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ. ಮನುಷ್ಯನಿಗೆ ಹಣ, ಆಸ್ತಿಗಿಂತ ಆರೋಗ್ಯ ಮುಖ್ಯವಾಗಿದೆ. ಈ ದೀಶೆಯಲ್ಲಿ ನಿತ್ಯವೂ ವ್ಯಾಯಾಮ, ಕ್ರೀಡೆ ಮೈಗೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಹಿಬೂಬು, ಸದಸ್ಯರಾದ ಅಂಬಣ್ಣ ನಾಯಕ, ಹನುಮಂತಪ್ಪ ಗಂಗಾಮತ, ರಾಮಲಿಂಗಪ್ಪ ಕಂಬಳಿ, ವಿರೇಶ ನಾಯಕ, ಗ್ರಾಪಂ ಮಾಜಿ ಉಪಾಧ್ಯಕ್ಷ ನಾಗರಾಜ ತಳವಾರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ತಿಪ್ಪಣ್ಣ, ನೌಕರ ಸಂಘದ ತಾಲೂಕಾಧ್ಯಕ್ಷ ಶಂಶಾದಬೇಗಂ ಸೇರಿದಂತೆ ಇತರರಿದ್ದರು.