ಸಮತೋಲಿತ ಜೀವನಕ್ಕೆ ಕ್ರೀಡೆ ಅತ್ಯಗತ್ಯ

| Published : Nov 10 2024, 01:49 AM IST

ಸಾರಾಂಶ

ಜೀವನದಲ್ಲಿ ಸಂಭವಿಸುವ ಏಳುಬೀಳುಗಳನ್ನು ಸಮಾನ ಮನಸ್ಥಿತಿಯಲ್ಲಿ ಸ್ವೀಕರಿಸಲು ಕ್ರೀಡೆ ಅತಿ ಮುಖ್ಯ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರೀಡಾಪಟು ಬರಾಳು ಪ್ರಕಾಶ್‌ ಹೇಳಿದರು. ನಗರದ ರಾಜೀವ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆಂಟ್ರಲ್ ಕರ್ನಾಟಕ ಝೋನ್ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯನ್ನು ಜೀವನದ ಒಂದು ಭಾಗವಾಗಿ ಸ್ವೀಕರಿಸಿ ಆ ಮೂಲಕ ಉತ್ತಮ ಆರೋಗ್ಯ ಹೊಂದುವಂತೆ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಜೀವನದಲ್ಲಿ ಸಂಭವಿಸುವ ಏಳುಬೀಳುಗಳನ್ನು ಸಮಾನ ಮನಸ್ಥಿತಿಯಲ್ಲಿ ಸ್ವೀಕರಿಸಲು ಕ್ರೀಡೆ ಅತಿ ಮುಖ್ಯ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರೀಡಾಪಟು ಬರಾಳು ಪ್ರಕಾಶ್‌ ಹೇಳಿದರು.

ನಗರದ ರಾಜೀವ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆಂಟ್ರಲ್ ಕರ್ನಾಟಕ ಝೋನ್ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯನ್ನು ಜೀವನದ ಒಂದು ಭಾಗವಾಗಿ ಸ್ವೀಕರಿಸಿ ಆ ಮೂಲಕ ಉತ್ತಮ ಆರೋಗ್ಯ ಹೊಂದುವಂತೆ ಸಲಹೆ ನೀಡಿದರು.

ರಾಜೀವ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಹೇಶ್ ಪಿ.ಕೆ.ರವರು ಮಾತನಾಡುತ್ತಾ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಬಹಳ ಮುಖ್ಯ ಎಂದು ಹೇಳಿದರು. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಯುವ ಜನತೆ ಕ್ರೀಡಾ ಚಟುವಟಿಕೆಯಲ್ಲಿ ಆಸಕ್ತಿ ತೋರದೆ ಮೊಬೈಲ್ ಚಟ ಅಂಟಿಸಿಕೊಂಡಿದ್ದಾರೆಂದು ಆತಂಕ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಸೋಮಶೇಖರ್‌, ರಾಜೀವ್ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಉಮೇಶ್ ಬಿ.ಡಿ., ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಗಣೇಶ್ ಹಾಗೂ ಸಂಸ್ಥೆಯ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.