ಸಾರಾಂಶ
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಂಡು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು. ಆರೋಗ್ಯಕರ ಭವಿಷ್ಯಕ್ಕಾಗಿ ಕ್ರೀಡೆ ಮತ್ತು ವ್ಯಾಯಾಮ ರೂಢಿಸಿಕೊಳ್ಳಬೇಕು. ಇಂದು ಆರೋಗ್ಯಕರ ಜೀವನ ಪದ್ಧತಿಗೆ ಕ್ರೀಡೆಗಳು ಅಗತ್ಯವಾಗಿವೆ ಎಂದು ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಅರುಣಕುಮಾರ ಗಾಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಂಡು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು. ಆರೋಗ್ಯಕರ ಭವಿಷ್ಯಕ್ಕಾಗಿ ಕ್ರೀಡೆ ಮತ್ತು ವ್ಯಾಯಾಮ ರೂಢಿಸಿಕೊಳ್ಳಬೇಕು. ಇಂದು ಆರೋಗ್ಯಕರ ಜೀವನ ಪದ್ಧತಿಗೆ ಕ್ರೀಡೆಗಳು ಅಗತ್ಯವಾಗಿವೆ ಎಂದು ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಅರುಣಕುಮಾರ ಗಾಳಿ ಹೇಳಿದರುನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗದ ಸಹಯೋಗದಲ್ಲಿ ನಡೆದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಶ್ವದ ಶ್ರೇಷ್ಠ ಫೀಲ್ಡ್ ಹಾಕಿ ಆಟಗಾರ ಎಂದು ಪ್ರಸಿದ್ಧಿಯಾದ ಮೇಜರ್ ಧ್ಯಾನ್ ಚಂದ್ ಅವರ ಮಾಂತ್ರಿಕ ಸ್ಟಿಕ್ ವರ್ಕ ಮತ್ತು ಅಸಾಧಾರಣ ಕೌಶಲ್ಯಗಳು ಕ್ರೀಡಾ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದವು. ಅವರು 1928, 1932 ಮತ್ತು 1936 ರಲ್ಲಿ ಸತತ ಮೂರು ಒಲಿಂಪಿಕ್ ಕ್ರೀಡಾಕೂಟದಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದು ಭಾರತೀಯ ಹಾಕಿ ತಂಡ ಅವರು ಮುನ್ನಡೆಸಿ, ದೇಶದ ಕ್ರೀಡಾ ಕ್ಷೇತ್ರ ಶ್ರೀಮಂತಗೊಳಸಿರುವ ಕೀರ್ತಿ ಅವರದ್ದಾಗಿದೆ. ಅವರ ಕ್ರೀಡಾ ಪರಂಪರೆ ಭಾರತದಾದ್ಯಂತ ಮಹತ್ವಾಕಾಂಕ್ಷಿ ಕ್ರೀಡಾಪಟುಗಳಿಗೆ ಇಂದಿಗೂ ಸ್ಫೂರ್ತಿ ನೀಡುತ್ತಲೇ ಇದೆ. ದೇಶದಲ್ಲಿ ರಾಷ್ಟ್ರೀಯ ಕ್ರೀಡಾ ದಿನ ವಿಶೇಷ ಸ್ಥಾನ ಹೊಂದಿದ್ದು, ಇದು ನಿಜವಾದ ಕ್ರೀಡಾ ಐಕಾನ್, ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನವನ್ನು ಸ್ಮರಿಸುತ್ತದೆ. ಈ ದಿನ ಕ್ರೀಡಾ ಶ್ರೇಷ್ಠತೆ ಗೌರವಿಸುವುದು, ಫಿಟ್ನೆಸ್ ಮತ್ತು ಯೋಗಕ್ಷೇಮ ಉತ್ತೇಜಿಸುವುದು, ಕ್ರೀಡಾ ಯುವ ಮನಸ್ಸುಗಳಿಗೆ ಸ್ಫೂರ್ತಿಯಾಗಿ ತುಂಬಲಾಗುವುದು ಎಂದರು.ಕಾಲೇಜಿನ ಕ್ರೀಡಾ ನಿರ್ದೇಶಕರಾದ ನೀಲಪ್ಪ ಕುರಿ ಅವರ ಮಾರ್ಗದರ್ಶನದಲ್ಲಿ 2024-25 ಸಾಲಿನಲ್ಲಿ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಒಟ್ಟು 16 ಕ್ರೀಡಾಪಟುಗಳು ಬಾಗಲಕೋಟೆ ವಿಶ್ವವಿದ್ಯಾಲಯದ ಕಬ್ಬಡಿ, ವಾಲಿಬಾಲ್, ಖೋ ಖೋ ಸೇರಿದಂತೆ ವಿವಿಧ ಕ್ರೀಡಾ ತಂಡಗಳಿಗೆ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.