ಸಾರಾಂಶ
ಮಕ್ಕಳು ಶಿಕ್ಷಕರ ಮಾರ್ಗದರ್ಶನದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಕಾರ್ಯ ಮಾಡುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯ ವಿದ್ಯಾರ್ಥಿಗಳು ಮಾಡಬೇಕು
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಅವಶ್ಯ
ಲಕ್ಷ್ಮೇಶ್ವರ: ಮಗುವಿನ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.ಪಟ್ಟಣದ ಬಿಸಿಎನ್ ಪಾಲಿಟೇಕ್ನಿಕ್ ಕಾಲೇಜು ಆವರಣದಲ್ಲಿ ಬುಧವಾರ ನಡೆದ ವಡವಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಾರ್ಷಿಕ ಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸಕ್ಕೆ ಪಠ್ಯ ಎಷ್ಟು ಪ್ರಾಮುಖ್ಯತೆ ನೀಡುತ್ತೆವೋ ಅಷ್ಟೇ ಪ್ರಾಮುಖ್ಯತೆ ಪಠ್ಯೇತರ ಚಟುವಟಿಕೆಗಳಿಗೆ ನೀಡುವುದು ಅಗತ್ಯವಾಗಿದೆ. ಕ್ರೀಡೆಯು ಕಲೆ, ಸಾಹಿತ್ಯ ಸೇರಿದಂತೆ ವಿವಿಧ ಆಯಾಮಗಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದು ಅಗತ್ಯವಾಗಿದೆ. ಮಕ್ಕಳು ಶಿಕ್ಷಕರ ಮಾರ್ಗದರ್ಶನದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಕಾರ್ಯ ಮಾಡುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯ ವಿದ್ಯಾರ್ಥಿಗಳು ಮಾಡಬೇಕು ಎಂದರು.ಈ ವೇಳೆ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಂ. ಹವಳದ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಸಿ.ಕೆ.ಪಾಟೀಲ ಮಾತನಾಡಿದರು. ಗೊಜನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಎನ್.ಕೆ. ಹತ್ತಿಕಾಳ, ಸುರೇಶ ಉಮಚಗಿ, ಈರಣ್ಣ ನವಲಿ, ನೀಲಪ್ಪ ಹೊಲ್ತಿಕೋಟಿ, ಮಂಜುನಾಥ ದೊಡ್ಡಮನಿ, ಎಸ್.ಸಿ. ಪಾಟೀಲ, ಎಂ.ಆರ್. ನೂಲ್ವಿ. ಎಂ.ಬಿ. ಕಲಾರಿ, ನಂದಾ ಪತ್ತಾರ, ಸಾವಿತ್ರಿ ಪ್ಯಾಟಿ, ಎಸ್.ಸಿ. ಚೋಳಿನ, ಶಿಕ್ಷಕಿ ನದಾಫ್, ಸುನೀಲ ತಳ್ಳಳ್ಳಿ ಮೊದಲಾದವರು ಇದ್ದರು.