ಸದಾ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ನೌಕರರು ಒಟ್ಟಾಗಿ ಕಲೆತು ಕ್ರಿಕೆಟ್ ಪಂದ್ಯಾವಳಿ ಆಡುವುದು ಈಗಿನ ಕಾರ್ಯಒತ್ತಡದ ಸಂದರ್ಭದಲ್ಲಿ ಉತ್ತಮ ಬೆಳವಣಿಗೆ ಇದು ಹೀಗೆಯೇ ಮುಂದುವರಿಯಲಿ ಎಂದು ಆಶಿಸಿದರು. ಪತ್ರಕರ್ತರು ಮತ್ತು ಅಧಿಕಾರಿಗಳು ತಮ್ಮ ನಿತ್ಯದ ಒತ್ತಡದ ಬದುಕಿನ ನಡುವೆಯೂ ಕ್ರೀಡೆಯಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು. ಕ್ರೀಡೆಯಲ್ಲಿ ಗೆಲುವು-ಸೋಲು ಮುಖ್ಯವಲ್ಲ; ಎಲ್ಲರೂ ಒಟ್ಟಾಗಿ ಭಾಗವಹಿಸುವ ಮನೋಭಾವವೇ ಮುಖ್ಯ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಕ್ರಿಕೆಟ್ ಸಮ್ಮಿಲನ ಸೌಹಾರ್ದ ಪಂದ್ಯಾವಳಿಗೆ ಶನಿವಾರ ಶಾಸಕ ಸ್ವರೂಪ್ ಚಾಲನೆ ನೀಡಿದರು.ಸ್ಥಳೀಯ ಶಾಸಕ ಎಚ್. ಪಿ. ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ, ಅರಕಲಗೂಡು ಶಾಸಕ ಎ.ಮಂಜು. ಎಸ್ಪಿ ಶುಭಾನ್ವಿತಾ ಮೊದಲಾದವರು ಪ್ರತ್ಯೇಕವಾಗಿ ಆಗಮಿಸಿ ಪಂದ್ಯಾವಳಿಗೆ ಶುಭ ಕೋರಿದರು. ಸ್ಥಳೀಯ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಮಾತನಾಡಿ, ಸದಾ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ನೌಕರರು ಒಟ್ಟಾಗಿ ಕಲೆತು ಕ್ರಿಕೆಟ್ ಪಂದ್ಯಾವಳಿ ಆಡುವುದು ಈಗಿನ ಕಾರ್ಯಒತ್ತಡದ ಸಂದರ್ಭದಲ್ಲಿ ಉತ್ತಮ ಬೆಳವಣಿಗೆ ಇದು ಹೀಗೆಯೇ ಮುಂದುವರಿಯಲಿ ಎಂದು ಆಶಿಸಿದರು. ಪತ್ರಕರ್ತರು ಮತ್ತು ಅಧಿಕಾರಿಗಳು ತಮ್ಮ ನಿತ್ಯದ ಒತ್ತಡದ ಬದುಕಿನ ನಡುವೆಯೂ ಕ್ರೀಡೆಯಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು. ಕ್ರೀಡೆಯಲ್ಲಿ ಗೆಲುವು-ಸೋಲು ಮುಖ್ಯವಲ್ಲ; ಎಲ್ಲರೂ ಒಟ್ಟಾಗಿ ಭಾಗವಹಿಸುವ ಮನೋಭಾವವೇ ಮುಖ್ಯ ಎಂದು ತಿಳಿಸಿದರು.ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟು, ಆರೋಗ್ಯಕರ ಮನೋಭಾವ ಹಾಗೂ ಉತ್ತಮ ಬಾಂಧವ್ಯ ನಿರ್ಮಾಣಕ್ಕೆ ಕ್ರೀಡೆ ಅತ್ಯುತ್ತಮ ವೇದಿಕೆಯಾಗಿದ್ದು, ಪತ್ರಕರ್ತರ ಮತ್ತು ವಿವಿಧ ಇಲಾಖೆ ಅಧಿಕಾರಿಗಳ ಸೌಹಾರ್ದ ಕ್ರಿಕೆಟ್ ಸಮ್ಮಿಲನ ಉತ್ತಮ ನಡವಳಿಕೆ. ನೂರಾರು ಆಸ್ಪತ್ರೆ ನಿರ್ಮಾಣ ಮಾಡುವುದಕ್ಕಿಂತ ಉತ್ತಮ ಕ್ರೀಡಾಂಗಣ ನಿರ್ಮಿಸಿ ಇಂತಹ ಆಟೋಟಗಳಿಗೆ ವೇದಿಕೆ ಕಲ್ಪಿಸುವುದು ಆರೋಗ್ಯಕರ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ ಮಾತನಾಡಿ, ಇಂಥದ್ದೊಂದು ಪಂದ್ಯಾವಳಿ ಆಯೋಜನೆ ಮಾಡಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಒಂದು ಕಡೆ ಸೇರುವುದು ಉತ್ತಮ ಬೆಳವಣಿಗೆ ಎಂದು ಸಂತಸ ಹಂಚಿಕೊಂಡರು. ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮದನಗೌಡ ಮಾತನಾಡಿ, ಪತ್ರಕರ್ತರು ಹಾಗೂ ವಿವಿಧ ಇಲಾಖೆಗಳ ನಡುವೆ ನಡೆಯುತ್ತಿರುವ ಈ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿರುವ ಪತ್ರಕರ್ತರ ಸಂಘದ ಈ ಪ್ರಯತ್ನ ಯಶಸ್ವಿಯಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಮೋದ್ಜಿ, ಜಿಲ್ಲಾ ಸಂಘದ ಅಧ್ಯಕ್ಷ ಕೆಂಚೇಗೌಡ, ಉಪಾಧ್ಯಕ್ಷರಾದ ನಂಜುಂಡೇಗೌಡ, ಪ್ರಕಾಶ್, ಮಾಜಿ ಅಧ್ಯಕ್ಷರಾದ ಬಾಳ್ಳುಗೋಪಾಲ್, ಉದಯಕುಮಾರ್, ಪ್ರಸನ್ನ ಕುಮಾರ್, ಲೀಲಾವತಿ, ರವಿನಾಕಲಗೂಡು, ಪ್ರಧಾನ ಕಾರ್ಯದರ್ಶಿ ಸುರೇಶ್, ಕಾರ್ಯದರ್ಶಿಗಳಾದ ಖುಶ್ವಂತ್, ಹರೀಶ್, ಖಜಾಂಚಿ ಪ್ರಕಾಶ್ , ಸಂಪಾದಕ ಜಗದೀಶ್ ಚೌಡುವಳ್ಳಿ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವಿವಿಧ ತಾಲೂಕುಗಳ ಪದಾಧಿಕಾರಿಗಳು ಹಾಜರಿದ್ದರು.