ಸಾರಾಂಶ
ತರಳಬಾಳು ವಿದ್ಯಾಸಂಸ್ಥೆ ಶಿವಮೊಗ್ಗ ವಲಯದ ಕ್ರೀಡಾಕೂಟಕನ್ನಡಪ್ರಭ ವಾರ್ತೆ ಭದ್ರಾವತಿ
ಪ್ರತಿಯೊಬ್ಬರಿಗೂ ಆರೋಗ್ಯವೇ ಮುಖ್ಯವಾಗಿದ್ದು, ಈ ಹಿನ್ನಲೆಯಲ್ಲಿ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.ಅವರು ಶನಿವಾರ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಹಾಲಪ್ಪ ವೃತ್ತ, ಭದ್ರಾ ಪ್ರೌಢಶಾಲೆ ವತಿಯಿಂದ ತರಳಬಾಳು ಹುಣ್ಣಿಮೆ ಪ್ರಯುಕ್ತ ಆಯೋಜಿಸಲಾಗಿದ್ದ ಚಿತ್ರದುರ್ಗ ಸಿರೆಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಶಿವಮೊಗ್ಗ ವಲಯದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ. ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಎಚ್. ತೀರ್ಥಯ್ಯ ಉಪಾಧ್ಯಕ್ಷ ಭುವನೇಶ್ವರ್, ನಿರ್ದೇಶಕರಾದ ಪರಮೇಶ್ವರಪ್ಪ, ಎಂ.ಎಸ್. ರವಿ, ಟಿ. ಮಲ್ಲಿಕಾರ್ಜುನ, ಚಂದ್ರಶೇಖರ್, ವಿಜಯಕುಮಾರ್, ಎಚ್.ಎಸ್. ಮಲ್ಲಿಕಾರ್ಜುನ, ಜಗದೀಶ್, ಚಂದಪ್ಪ, ಎ.ಎಸ್. ಮಲ್ಲಿಕಾರ್ಜುನ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಬಾಲರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕ್ರೀಡಾಕೂಟದಲ್ಲಿ ಬಾಲಕ ಮತ್ತು ಬಾಲಕಿಯರ ಒಟ್ಟು ೧೩ ಶಾಲೆಗಳ ತಂಡಗಳು ಭಾಗವಹಿಸಿದ್ದವು. ದೈಹಿಕ ಶಿಕ್ಷಕರಾದ ಶಿವಲಿಂಗೇಗೌಡ, ಅಪೇಕ್ಷ ಮಂಜುನಾಥ್, ಸಿದ್ದಪ್ಪ ಸೇರಿದಂತೆ ೨೦ ಮಂದಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.- - -
ಡಿ೯-ಬಿಡಿವಿಟಿಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಹಾಲಪ್ಪ ವೃತ್ತ, ಭದ್ರಾ ಪ್ರೌಢಶಾಲೆ ವತಿಯಿಂದ ತರಳಬಾಳು ಹುಣ್ಣಿಮೆ ಪ್ರಯುಕ್ತ ಶನಿವಾರ ಆಯೋಜಿಸಲಾಗಿದ್ದ ಚಿತ್ರದುರ್ಗ ಸಿರೆಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಶಿವಮೊಗ್ಗ ವಲಯದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.