ಸಾರಾಂಶ
ಪ್ರತಿನಿತ್ಯ ನಮ್ಮ ದೈನಂದಿನ ಜೀವನದಲ್ಲಿ ನಡಿಗೆ ವ್ಯಾಯಾಮ ಯೋಗಾಸನ ಯಾವುದಾದರೂ ಒಂದು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ನಮ್ಮ ದೈಹಿಕ ಶಕ್ತಿ ಹೆಚ್ಚುವುದಲ್ಲದೆ ಮನಸ್ಸು ಉಲ್ಲಾಸವಾಗಿರುತ್ತದೆ. ಕ್ರೀಡಾಪಟುಗಳಿಗೆ ಸರ್ಕಾರದಿಂದ ನೆರವು ನೀಡಲಾಗುವುದು
ಕನ್ನಡಪ್ರಭ ವಾರ್ತೆ ಮಾಲೂರು
ವಿದ್ಯಾರ್ಥಿಗಳು ಹಾಗೂ ಯುವಕರ ಅವಿಭಾಜ್ಯ ಅಂಗ ಕ್ರೀಡೆ. ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿರಲು ಕ್ರೀಡೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವಂತೆ ತಹಸೀಲ್ದಾರ್ ಕೆ.ರಮೇಶ್ ಹೇಳಿದರು.ಪಟ್ಟಣದ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ೨೦೨೪-೨೫ನೇ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯಕ್ಕೆ ಕ್ರೀಡೆ ಸಹಕಾರಿಕ್ರೀಡೆಗಳು ವಿದ್ಯಾರ್ಥಿಗಳು ಹಾಗೂ ಯುವಕರು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಸಹಕಾರಿಯಾಗುತ್ತದೆ. ಪ್ರತಿನಿತ್ಯ ನಮ್ಮ ದೈನಂದಿನ ಜೀವನದಲ್ಲಿ ನಡಿಗೆ ವ್ಯಾಯಾಮ ಯೋಗಾಸನ ಯಾವುದಾದರೂ ಒಂದು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ನಮ್ಮ ದೈಹಿಕ ಶಕ್ತಿ ಹೆಚ್ಚುವುದಲ್ಲದೆ ಮನಸ್ಸು ಉಲ್ಲಾಸವಾಗಿರುತ್ತದೆ
ಕ್ರೀಡಾಕೂಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ ತೀರ್ಪುಗಾರರ ತೀರ್ಪಿಗೆ ಬದ್ಧರಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆಯುವಂತೆ ಹೇಳಿದ ಅವರು, ತಾಲೂಕಿನಲ್ಲಿ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ರಾಜ್ಯಮಟ್ಟ ಹಾಗೂ ರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಹೆಸರು ಪಡೆದಿದ್ದಾರೆ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವೈಯುಕ್ತಿಕವಾಗಿ ಸಹಕಾರ ನೀಡಲಾಗುವುದು ಎಂದರು.ಕ್ರೀಡಾ ಜ್ಯೋತಿಯನ್ನು ಹೊತ್ತು ತಂದ ವಿದ್ಯಾರ್ಥಿಗಳು ಪುರಸಭಾ ಅಧ್ಯಕ್ಷೆ ಕೋಮಲ ಹಾಗೂ ತಹಸೀಲ್ದಾರ್ ಕೆ.ರಮೇಶ್, ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಇಓ ಚಂದ್ರಕಲಾ, ಕ್ಷೇತ್ರ ಸಮನ್ವಯಾಧಿಕಾರಿ ವೆಂಕಟಸ್ವಾಮಿ, ವೈದ್ಯಾಧಿಕಾರಿ ಡಾ.ಹಿರೇಮಠ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷೆ ಜಯಂತಿ, ಪ್ರಾ.ಶಾ.ಶಿ.ಸಂ. ಅಧ್ಯಕ್ಷ ಷಣ್ಮುಖಯ್ಯ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಬಡ್ತಿ ಮುಖ್ಯಶಿಕ್ಷಕರ ಸಂಘದ ಮುನಿನಾರಾಯಣ, ಟಿಪಿಓ ವೈ.ವೆಂಕಟೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಕುಮಾರಿ, ನಾಗಪ್ಪ, ಗೋಪಿ, ಇನ್ನಿತರರು ಹಾಜರಿದ್ದರು.