ಸಾರಾಂಶ
ಕ್ರೀಡೆಗಳು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗವಾಗಿವೆ. ಶಾಲಾ ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ಚಟವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕು ಎಂಬ ಆರೋಗ್ಯಕರ ಮನಸಿರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಶಾಲಾ ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರು ಪ್ರತಿನಿತ್ಯ ತಮಗಿಷ್ಟದ ಕ್ರೀಡೆಗಳಲ್ಲಿ ಭಾಗಿಯಾಗುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಯಾವುದೇ ಕ್ರೀಡಾಕೂಟವಿರಲಿ ಲವಲವಿಕೆಯಿಂದ ಭಾಗಿಯಾಗುವ ಗುಣ ಬೆಳೆಸಿಕೊಳ್ಳಬೇಕು ಎಂದ ನಗರಸಭಾಧ್ಯಕ್ಷ ಎ.ಗಜೇಂದ್ರ ಹೇಳಿದರು.ನಗರದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಮೇಲಾಟಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಫಲಿತಾಂಶ ಸಮಾನವಾಗಿ ಸ್ವೀಕರಿಸಿಶಾಲಾ ಕಾಲೇಜು ದಿನಗಳಲ್ಲಿ ಕ್ರೀಡೆಗಳಲ್ಲಿ ಭಾಗಿಯಾಗಿ ಮಾಡುವ ಸಾಧನೆ ಜೀವನ ಪರ್ಯಂತ ನಮ್ಮ ಜತೆಗೆ ಉತ್ತಮ ನೆನಪಾಗಿ ಉಳಿದುಕೊಳ್ಳಲಿದೆ. ಕ್ರೀಡಾಕೂಟ ಎಂದ ನಾನಾ ಆಟೋಟಗಳ ಸಂಗಮವಾಗಿದೆ. ಗೆಲುವೇ ಪ್ರತಿಯೊಬ್ಬ ಕ್ರೀಡಾಪಟುವಿನ ಗುರಿಯಾಗಿದ್ದರೂ ಸೋಲನ್ನು ಕೂಡ ಅಷ್ಟೇ ಸಮಾಧಾನ ದಿಂದ ಸಂತೋಷದಿಂದ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ
ನಗರಸಭೆಯ ಉಪಾಧ್ಯಕ್ಷ ನಾಗರಾಜ್ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗವಾಗಿವೆ. ಶಾಲಾ ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ಚಟವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕು ಎಂಬ ಆರೋಗ್ಯಕರ ಮನಸಿರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ವಿದ್ಯಾರ್ಥಿಗಳ ಬದುಕೇ ಬದಲಾಗಲಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಎಲ್ಲ ಮುಖ್ಯಸ್ಥರು, ಶಿಕ್ಷಕರು ಹಾಗೂ ಕ್ರೀಡಾಪಟುಗಳು ಇದ್ದರು.