ದೈಹಿಕ ಸದೃಢತೆಗೆ ಕ್ರೀಡಾಕೂಟ ಸಹಕಾರಿ

| Published : Apr 13 2025, 02:01 AM IST

ಸಾರಾಂಶ

ನಗರದ ಸರ್ಕಾರಿ ವಿಜ್ಞಾನ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು ಹಾಗೂ ಮಲೆನಾಡು ತಾಂತ್ರಿಕ ಕಾಲೇಜು ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ವಿವಿಧ ಗಣ್ಯರು ಆಗಮಿಸಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಸರ್ಕಾರಿ ವಿಜ್ಞಾನ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು ಹಾಗೂ ಮಲೆನಾಡು ತಾಂತ್ರಿಕ ಕಾಲೇಜು ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ವಿವಿಧ ಗಣ್ಯರು ಆಗಮಿಸಿ ಚಾಲನೆ ನೀಡಿದರು. ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕರ್ನಾಟಕದ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಗರದ ಮೂರು ಮೈದಾನಗಳಲ್ಲಿ ಶನಿವಾರದಿಂದ ಆರಂಭವಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಇಡೀ ಪತ್ರಕರ್ತರು ಒಂದು ಕಡೆ ಹಾಸನದಲ್ಲಿ ಸೇರಿರುವುದು ನಮ್ಮ ಜಿಲ್ಲೆ ಹೆಮ್ಮೆ ಪಡುವ ದಿನವಾಗಿದೆ. ಇಷ್ಟು ಅದ್ಭುತವಾಗಿ ಕ್ರಿಕೆಟ್ ಕ್ರೀಡಾಕೂಟ ನಡೆಯುತ್ತಿದೆ. ಒಗ್ಗಟ್ಟು ನೋಡಿದ್ದೇನೆ. ಅದು ಜಿಲ್ಲಾ ಪತ್ರಕರ್ತರ ಸಂಘ. ಒಂದು ಕುಟುಂಬ ಸದಸ್ಯರಂತೆ ನಡೆದುಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಇನ್ನಷ್ಟು ಯಶಸ್ವಿಯಾಗಿ ನಡೆಯಲಿ ಎಂದರು.

ಪತ್ರಕರ್ತರ ಸಂಘ ರಾಜಕಾರಣಿಗಳ ಹಾಗೂ ಸಾರ್ವಜನಿಕರು ತಪ್ಪನ್ನು ತಿದ್ದುವ ಕೆಲಸ ಮಾಡುತ್ತಿದೆ. ಅವರ ಆರೋಗ್ಯವು ನಮಗೆ ಬಹಳ ಮುಖ್ಯವಾಗಿರುತ್ತದೆ. ಇಂತಹ ಕ್ರೀಡೆಗಳಲ್ಲಿ ನಾವು ಕೂಡ ಭಾನುವಾರ ಭಾಗವಹಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪ್ರತಿ ವರ್ಷವೂ ಪತ್ರಕರ್ತರಿಗಾಗಿಯೇ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿ ೨೪ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ವಿಶೇಷ ಎಂದರು. ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಆರ್.ಟಿ. ದ್ಯಾವೇಗೌಡ ಮಾತನಾಡಿ, ಇಷ್ಟೊಂದು ಪತ್ರಕರ್ತರು ಒಂದೆಡೆ ಸೇರಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಇಂತಹ ಕ್ರೀಡೆ ಹೆಚ್ಚೆಚು ನಡೆಯಲಿ ಎಂದು ಶುಭ ಹಾರೈಸಿದರು. ಎಂಸಿಇ ಕಾಲೇಜು ಪ್ರಧಾನ ಕಾರ್ಯದರ್ಶಿ ಚೌಡಹಳ್ಳಿ ಜಗದೀಶ್ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಇಂತಹ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಸುತ್ತಿರುವುದು ಉತ್ತಮವಾಗಿದೆ. ಇಡೀ ರಾಜ್ಯದಲ್ಲಿ ಈ ಕ್ರೀಡೆ ಯಶಸ್ವಿ ತರಬೇಕು. ಎರಡು ದಿವಸದಲ್ಲಿ ಒಳ್ಳೆಯ ಸಂದೇಶ ಕೊಡಲಿ ಎಂದರು. ರಾಜ್ಯ ಮಟ್ಟದ ಕ್ರೀಡೆಗೆ ಆಗಮಿಸಿದ್ದ ಕ್ರೀಡಾಪಟುಗಳಿಗೆ ಬೆಳಗ್ಗೆ ತಿಂಡಿ, ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು. ಎಲ್ಲರೂ ಅಚ್ಚುಕಟ್ಟು ವ್ಯವಸ್ಥೆಗೆ ಪ್ರಶಂಸೆ ವ್ಯಕ್ತಪಡಿಸಿದರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ಹೆಚ್. ವೇಣುಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಶಿಧರ್ ಹಾಗೂ ಎಲ್ಲ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರಾದ ಕೆ.ಆರ್. ಮಂಜುನಾಥ್, ಎಸ್.ಎಸ್. ಪ್ರಸನ್ನ ಕುಮಾರ್, ಲೀಲಾವತಿ, ಹಾಗೂ ಉದಯರವಿ ಮೊದಲಾದವರು ಆಗಮಿಸಿ ಪತ್ರಕರ್ತರಿಗೆ ಉತ್ತೇಜನ ನೀಡಿದರು. ಕ್ರಿಕೆಟ್ ಪಂದ್ಯಾವಳಿ ಅತ್ಯುತ್ತಮವಾಗಿ ನಡೆಯುತ್ತಿದ್ದರೂ ಸಲ್ಪ ಮಳೆರಾಯನ ಅಡ್ಡಿಯಿಂದ ಎಲ್ಲಾ ಪಂದ್ಯಾಗಳು ಆಡಿಸಲು ಸಾಧ್ಯವಾಗದೆ ಭಾನುವಾರ ನಡೆಸಲು ಮುಂದಾದರು. ಒಂದು ಗುಂಪಿನಲ್ಲಿ ೨ಕ್ಕೆ ೨ ಪಂದ್ಯ ಗೆದ್ದರೆ, ಇನ್ನೂ ಕೆಲವು ತಂಡಗಳು ಎರಡರಲ್ಲಿ ೧, ಉಳಿದ ತಂಡಗಳು ಎರಡೂ ಪಂದ್ಯ ಸೋತವು. ಇನ್ನೇನು ಲೀಗ್ ಪಂದ್ಯಗಳು ಮುಗಿಯುವ ಹಂತ ತಲುಪಿದ್ದಾಗ ದಿಢೀರ್ ಮಳೆ ಬಂದು ಪಂದ್ಯಕ್ಕೆ ಅಡ್ಡಿ ಪಡಿಸಿತು. ರಾಜ್ಯ ಸಮಿತಿ ಸದಸ್ಯ ಎಚ್.ಬಿ. ಮದನಗೌಡ, ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್‌ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಪುಂಡಲೀಕ ಬಾಳೋಜಿ, ಖಜಾಂಚಿ ವಾಸುದೇವ ಹೊಳ್ಳ, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಂ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಮೈಸೂರು ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಮಾಜಿ ಅಧ್ಯಕ್ಷರಾದ ರವಿ ನಾಕಲಗೂಡು, ಕೆ.ಆರ್. ಮಂಜುನಾಥ್, ಲೀಲಾವತಿ, ಬಿ.ಆರ್.ಉದಯ್ ಕುಮಾರ್, ಪ್ರಸನ್ನಕುಮಾರ್, ಉಪಾಧ್ಯಕ್ಷ ಮೋಹನ್, ಹರೀಶ, ಕಾರ್ಯದರ್ಶಿ ಸಂತೋಷ್, ಪಿ.ಎ. ಶ್ರೀನಿವಾಸ್, ನಟರಾಜ್‌, ಖಜಾಂಚಿ ಕುಮಾರ್‌ ಉಪಸ್ಥಿತರಿದ್ದರು.