ಸಾರಾಂಶ
ದೊಡ್ಡಬಳ್ಳಾಪುರ: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳು ವಿದ್ಯಾಭ್ಯಾಸದ ಅವಿಭಾಜ್ಯ ಅಂಗ. ದೈಹಿಕ ಮತ್ತು ಮಾನಸಿಕ ದೃಢತೆಯ ಜತೆಗೆ ಮನಸ್ಸಿನ ಏಕಾಗ್ರತೆ ಮೂಡಿಸುತ್ತದೆ ಮತ್ತು ಶರೀರ ಆರೋಗ್ಯಕರವಾಗಿರುತ್ತದೆ ಎಂದರು.ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಮಕ್ಕಳ ಪ್ರತಿಭೆ ಗುರುತಿಸಲು ಕ್ರೀಡಾಕೂಟಗಳು ಸಹಕಾರಿಯಾಗಿದ್ದು, ಕ್ರೀಡಾಕೂಟದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪಲ್ತರಬೇಕುಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ವಿಜೇತರಾದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲು ಗೆದ್ದು ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲು ಹಣ ಬಿಡುಗಡೆಯಾಗಿದ್ದು ಕೂಡಲೇ ಕ್ರೀಡಾಂಗಣದ ಗುದ್ದಲಿ ಪೂಜೆ ನೆರವೇರಲಿದೆ. ತಾಲೂಕಿನ ಹೃದಯ ಭಾಗದಲ್ಲಿರು ಭಗತ್ ಸಿಂಗ್ ಕ್ರೀಡಾಂಗಣದ ಮತ್ತಷ್ಟು ಅಭಿವೃದ್ಢಿ ಪಡಿಸುವಂತೆ ಸಚಿವರಿಗೆ ತಿಳಿಸಿದರು.ಕ್ರೀಡಾಕೂಟದಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕ್ರೀಡಾಕೂಟದಲ್ಲಿ ಖೋ-ಖೋ, ಕಬ್ಬಡಿ, ವಾಲಿಬಾಲ್, ಥ್ರೋಬಾಲ್, ಭರ್ಜಿ ಎಸೆತ, ಗುಂಡು ಎಸೆತ, ಚಕ್ರ ಎಸೆತ, 100, 200, 800 ಓಟದ ಸೇರಿದಂತೆ ವಿವಿಧ ಸ್ಪರ್ಧೆ ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಸಚಿವರಿಂದ ಮತ್ತು ಅಥಿತಿ ಗಣ್ಯರಿಂದ ಬಹುಮಾನ ವಿತರಿಸಲಾಯಿತು.
ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್, ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ, ಮಹೇಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರವಿ ಸಿದ್ದಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಜಯಲಕ್ಷ್ಮೀ ಹಾಗೂ ಸದಸ್ಯರುಗಳು, ತಿರ್ಪುಗಾರರು, ಶಿಕ್ಷಕರು ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು.8ಕೆಡಿಬಿಪಿ2- ದೊಡ್ಡಬಳ್ಳಾಪುರದಲ್ಲಿ ಬೆಂ.ಗ್ರಾ ಜಿಲ್ಲಾ ದಸರಾ ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.
8ಕೆಡಿಬಿಪಿ3-ದೊಡ್ಡಬಳ್ಳಾಪುರದಲ್ಲಿ ಬೆಂ.ಗ್ರಾ ಜಿಲ್ಲಾ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಕ್ರೀಡಾಪಟುಗಳನ್ನು ಅಭಿನಂದಿಸಿ ಶುಭ ಕೋರಿದರು.