ದೈಹಿಕ, ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅವಶ್ಯಕ

| Published : Aug 20 2024, 12:52 AM IST

ಸಾರಾಂಶ

ಪಠ್ಯೇತರ ಚಟುವಟಿಕೆಗಳು ಕಲಿಕೆಯ ಒಂದು ಭಾಗವಾಗಿದ್ದು ಆಟಗಾರನ ದೈಹಿಕ, ಶಾರೀರಿಕ ಹಾಗೂ ಮನಸ್ಸನ್ನು ವೃದ್ಧಿಗೊಳಿಸುವ ಸಾಧನ ಎಂದು ಶಾಸಕ, ಆಹಾರ ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಪಠ್ಯೇತರ ಚಟುವಟಿಕೆಗಳು ಕಲಿಕೆಯ ಒಂದು ಭಾಗವಾಗಿದ್ದು ಆಟಗಾರನ ದೈಹಿಕ, ಶಾರೀರಿಕ ಹಾಗೂ ಮನಸ್ಸನ್ನು ವೃದ್ಧಿಗೊಳಿಸುವ ಸಾಧನ ಎಂದು ಶಾಸಕ, ಆಹಾರ ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ ತಿಳಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯಲ್ಲಿ ತೊಡಗಿಸಿಕೊಂಡವರಿಗೆ ಯಾವುದೇ ರೋಗಗಳು ಬಾಧಿಸುವುದಿಲ್ಲ. ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಲು ಕ್ರೀಡೆಗಳು ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿಶೇಷವಾಗಿ ದೇಶೀಯ ಆಟಗಳನ್ನು ಆಡಬೇಕೆಂದು ತಿಳಿಸಿದರು.

ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸಿ ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲೆ, ರಾಜ್ಯ,ರಾಷ್ಟ್ರ ಮಟ್ಟದ ಕ್ರೀಡೆಗಳಿಗೆ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಉತ್ತಮ ಕೀರ್ತಿ ತನ್ನಿರಿ ಎಂದು ಶುಭ ಹಾರೈಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಮೋಸೀನ್ ಅಧ್ಯಕ್ಷತೆವಹಿಸಿ ಮಾತನಾಡಿ, ತಾಲೂಕಿನ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಆಡಲು ಸಿಂಥೆಟಿಕ್ ಟ್ರ್ಯಾಕ್‌ ಇರುವುದರಿಂದ ಎಲ್ಲಾ ಹೋಬಳಿಯ ಕ್ರೀಡಾಕೂಟಗಳನ್ನು ಹೊಸದುರ್ಗ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು, ಕ್ಷೇತ್ರ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ, ತಾಲೂಕು ಅಕ್ಷರ ದಾಸೋಹ ನಿರ್ದೇಶಕ ಶಾಂತಪ್ಪ, ಯುವಜನ ಸೇವಾ ಕ್ರೀಡಾಧಿಕಾರಿ ಮಹಾಂತೇಶ,ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀನಿವಾಸ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ ಆರ್.ಮಂಜುನಾಥ, ಕಾರ್ಯದರ್ಶಿ ಮಲ್ಲಿಕಾರ್ಜುನ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಪ್ಪೇಶಪ್ಪ, ಶಿಕ್ಷಣ ಸಂಯೋಜಕರಾದ ಶಶಿಧರ, ಯತೀಶ್, ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.