ಮಾನವನ ಮಾನಸಿಕ ಶಾರೀರಿಕ ಬೆಳವಣಿಗೆಗೆ ಕ್ರೀಡೆ ಉಪಯುಕ್ತ: ಕೆ.ಎಸ್.ರಮೇಶ್

| Published : Sep 24 2025, 01:02 AM IST

ಮಾನವನ ಮಾನಸಿಕ ಶಾರೀರಿಕ ಬೆಳವಣಿಗೆಗೆ ಕ್ರೀಡೆ ಉಪಯುಕ್ತ: ಕೆ.ಎಸ್.ರಮೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೀಡೆಯು ಮಾನವನ ಮಾನಸಿಕ, ಶಾರೀರಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಕೆ.ಎಸ್‌. ರಮೇಶ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕ್ರೀಡೆಯು ಮಾನವನ ಮಾನಸಿಕ ಶಾರೀರಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸಮಾಜದ ಜನಾಂಗದವರ ಸಮ್ಮಿಲನ ಒಗ್ಗೂಡುವಿಕೆಗೆ ಬಾಂಧವ್ಯ ವೃದ್ಧಿಗೆ ವೇದಿಕೆ ಕಲ್ಪಿಸುತ್ತದೆ ಎಂದು ಮಡಿಕೇರಿ ಮಲಯಾಳಿ ಸಮಾಜದ ಅಧ್ಯಕ್ಷ, ಮಡಿಕೇರಿ ನಗರಸಭಾ ಸದಸ್ಯರಾದ ಕೆ.ಎಸ್.ರಮೇಶ್ ಹೇಳಿದರು.ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ 18ನೇ ವರ್ಷದ ಓಣಂ ಆಚರಣೆ ಪ್ರಯುಕ್ತ ಸುಂಟಿಕೊಪ್ಪದ ಜಿ.ಎಂ.ಪಿ.ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಮಕ್ಕಳ ಪ್ರತಿಭೆಯನ್ನು ಈ ಕ್ರೀಡಾಕೂಟದಿಂದ ಹೊರ ಹೊಮ್ಮಲಿದೆ. ಸಮಾಜದ ಬಾಂಧವರ ಸ್ನೇಹ ಸಮ್ಮಿಲನಕ್ಕೆ ಇದು ನಾಂದಿಯಾಗಲಿದೆ ಎಂದು ಹೇಳಿದರು.ಕ್ರೀಡಾಕೂಟದ ಉದ್ಘಾಟನೆಯನ್ನು ಉದ್ಯಮಿ ಸಮಾಜ ಸೇವಕರಾದ ಅಯ್ಯಪ್ಪ ನಾಯರ್ ನೆರವೇರಿಸಿ ಶುಭಹಾರೈಸಿದರು.ಸಮಾರಂಭದಲ್ಲಿ ಸುಂಟಿಕೊಪ್ಪ ಮಲಯಾಳಿ ಸಮಾಜದ ಅಧ್ಯಕ್ಷ ರಮೇಶ್‌ಪಿಳ್ಳೆ, ಸುಂಟಿಕೊಪ್ಪ ಮಲಯಾಳಿ ಸಮಾಜದ ಮಾಜಿ ಅಧ್ಯಕ್ಷರಾದ ಪಿ.ಆರ್.ಸುಕುಮಾರ್, ಎಂ.ಆರ್.ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅನಿಲ್‌ಕುಮಾರ್, ಪ್ರಕಾಶ್, ಸೋಮವಾರಪೇಟೆ ತಾಲೂಕು ಮಲಯಾಳಿ ಸಮಾಜದ ಸ್ಥಾಪಕ ಅಧ್ಯಕ್ಷ ಪ್ರಕಾಶ್ ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಹಗ್ಗ ಜಗ್ಗಟ ಸ್ಪರ್ಧೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಮಹಿಳಾ 8 ತಂಡ ಮತ್ತು ಪುರುಷರ ವಿಭಾಗದಲ್ಲಿ 6 ತಂಡಗಳು ಭಾಗವಹಿಸಿದ್ದವು. ಅಲ್ಲದೆ ಗ್ರಾಮೀಣ ಕ್ರೀಡಾಕೂಟಗಳಲ್ಲಿ ಸುಂಟಿಕೊಪ್ಪ ಮಲಯಾಳಿ ಬಾಂಧವರು ಮಕ್ಕಳು, ಯುವಕರು, ಮಹಿಳೆಯರು, ಪುರುಷರು ಸೇರಿದಂತೆ ಹಿರಿಯರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ರಸದೌತಣವನ್ನೇ ಉಣಬಡಿಸಿದರು. ಸ್ಪರ್ಧಿಗಳಿಗೆ ಪ್ರೋತ್ಸಾಹ ನೀಡುತ್ತಾ ಸಿಳ್ಳೆ ಕೇಕೆಗಳ ಶಬ್ಧವು ಮೈದಾನದ ತುಂಬಾ ಕೇಳಿ ಬಂದವು.