ಕ್ರೀಡೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳಲ್ಲಿ ಕ್ರೀಡಾಸಕ್ತಿಯನ್ನು ಬೆಳೆಸಿ, ಪ್ರೋತ್ಸಾಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಚಿನ್ನಿಕಟ್ಟಿ ಕರೆ ನೀಡಿದರು.
ಹಾನಗಲ್ಲ: ಕ್ರೀಡೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳಲ್ಲಿ ಕ್ರೀಡಾಸಕ್ತಿಯನ್ನು ಬೆಳೆಸಿ, ಪ್ರೋತ್ಸಾಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಚಿನ್ನಿಕಟ್ಟಿ ಕರೆ ನೀಡಿದರು.
ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಇಲಾಖಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಕ್ಷೇತ್ರ ಸಮನ್ವಯಾಧಿಕಾರಿ ನಾಗೇಂದ್ರಪ್ಪ ಡಿ. ಅವರು ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ ಸವಣೂರ ಮಾತನಾಡಿ, ಕ್ರೀಡೆಗಳು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬೆಳವಣಿಗೆಗೆ ಪೂರಕವಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಮಕಬುಲ್ ಲಿಂಗದಹಳ್ಳಿ, ನಿಕಟಪೂರ್ವ ಅಧ್ಯಕ್ಷ ಸಿ.ಜಿ.ಪಾಟೀಲ, ವಿಜಯೇಂದ್ರ ಯತ್ನಳ್ಳಿ, ಮಲ್ಲೇಶ ಬಡಿಗೇರ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಮಹೇಶ ನಾಯಕ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಕರೆಪ್ಯಾಟೆ, ಕಾರ್ಯದರ್ಶಿ ಎನ್.ಎಸ್. ಮುಶೆಪ್ಪನವರ, ಪ್ರೌಢಶಾಲಾ ದೈಹಿಕ ಶಿಕ್ಷಕರ ಗ್ರೇಡ್-1 ಸಂಘದ ಅಧ್ಯಕ್ಷ ಎಲ್.ಬಿ. ಉಗಳವಾಟ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ಬೂದಿಹಾಳ ಹಾಗೂ ಕಾರ್ಯದರ್ಶಿ ಬಿ.ಎಂ. ದಿಡಗೂರ, ದೈಹಿಕ ಶಿಕ್ಷಣ ಪರೀಕ್ಷಕ ಎಫ್.ಯು. ಹಾದಿಮನಿ, ಶಿಕ್ಷಣ ಸಂಯೋಜಕ ಬಿ.ಎನ್. ಸಂಗೂರ, ಬಿಆರ್ಪಿಗಳು, ಬಿಐಆರ್ಟಿಗಳು, ಸಿಆರ್ಪಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ವಿವಿಧ ಶಾಲೆಗಳ ಶಿಕ್ಷಕ-ಶಿಕ್ಷಕಿಯರು ಹಾಗೂ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.