ಕ್ರೀಡೆಯಿಂದ ಆರೋಗ್ಯ, ಬದುಕಿಗೆ ಶಿಸ್ತು: ಅಶೋಕ್ ರೈ

| Published : Sep 03 2025, 01:02 AM IST

ಕ್ರೀಡೆಯಿಂದ ಆರೋಗ್ಯ, ಬದುಕಿಗೆ ಶಿಸ್ತು: ಅಶೋಕ್ ರೈ
Share this Article
  • FB
  • TW
  • Linkdin
  • Email

ಸಾರಾಂಶ

ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾದ ತಾಲೂಕು ಮಟ್ಟದ ದಸರಾ-ಕ್ರೀಡಾಕೂಟವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.

ಪುತ್ತೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ಆರೋಗ್ಯದ ಜತೆಗೆ ಶಿಸ್ತು ಬೆಳೆಯುತ್ತದೆ. ಕ್ರೀಡಾಸ್ಪರ್ಧೆಗಳಲ್ಲಿ ಗೆಲುವಿಗಿಂತಲೂ ಭಾಗವಹಿಸುವುದೇ ಮುಖ್ಯ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾದ ತಾಲೂಕು ಮಟ್ಟದ ದಸರಾ-ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಪುತ್ತೂರಿನ ಮುಂಡೂರಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕಾಗಿ ೧೩.೫೦ ಎಕ್ರೆ ಜಾಗವನ್ನು ಗುರುತಿಸಿ, ೯.೫೦ ಕೋಟಿ ರು. ಅನುದಾನವನ್ನೂ ನೀಡಲಾಗಿದೆ. ಇಲ್ಲಿ ರಾಜ್ಯಮಟ್ಟದ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಲಿದೆ. ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿ ೨ ಕೋಟಿ ರು.ನಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು, ಲೈಟಿಂಗ್ ಹಾಗೂ ಜಿಮ್ ವ್ಯವಸ್ಥೆಗೆ ೧.೨೫ ಕೋಟಿ ರು. ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ರೈ ಅವರನ್ನು ಗೌರವಿಸಲಾಯಿತು.ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಕ್ರೀಡಾ ಜ್ಯೋತಿ ಬೆಳಗಿದರು. ಕ್ರೀಡಾ ಸಾಧಕಿ ಕೀರ್ತಿ ಮತ್ತು ತಂಡದವರು ಕ್ರೀಡಾಜ್ಯೋತಿಯೊಂದಿಗೆ ವೇದಿಕೆಗೆ ಆಗಮಿಸಿದರು. ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್, ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ, ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ. ವಿಜಯ ಹಾರ್ವಿನ್, ಜಿಲ್ಲಾ ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಅಧ್ಯಕ್ಷ ದಿನೇಶ್ ಸಾಲ್ಯಾನ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ., ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ರಾಜೇಶ್ ಕೆ., ಯತೀಶ್ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮತ್ತಿತರರಿದ್ದರು.ಯುವ ಸಬಲೀಕರಣ ಕ್ರೀಡಾ ಇಲಾಖೆ ನೋಡೆಲ್ ಅಧಿಕಾರಿ ಎಂ. ಮಾಮಚ್ಚನ್ ಸ್ವಾಗತಿಸಿದರು. ಯುವ ಸಬಲೀಕರಣ ಕ್ರೀಡಾ ಇಲಾಖೆ ಮೇಲ್ವಿಚಾರಕ ಶ್ರೀಕಾಂತ್ ಬಿರಾವು ವಂದಿಸಿದರು.