ಸಾರಾಂಶ
ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಗದಗ: ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ (ಫುಟ್ಬಾಲ್ ಮತ್ತು ಹಾಕಿ) ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಗದಗ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ವಿಜೇತರಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ ಮಾತನಾಡಿ, ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಿದ್ದಾರೆ. ಕ್ರೀಡೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದು ಮುಖ್ಯ. ಕ್ರೀಡಾಪಟುಗಳು ನಿರ್ಣಾಯಕರ ನಿರ್ಣಯ ಪಾಲಿಸಿ, ಕ್ರೀಡಾಕೂಟ ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಗದಗ ಜಿಲ್ಲೆಯ ಹಾಕಿ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ. ಜಿಲ್ಲಾ ಮಟ್ಟದಿಂದ ಈಗ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಜಿಲ್ಲೆಗೆ ಆಗಮಿಸಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಬೇಕು ಎಂದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಗಳು (ಫುಟ್‌ಬಾಲ್ ಮತ್ತು ಹಾಕಿ) ಸೆ. 11 ಮತ್ತು 12ರಂದು ಜರುಗುತ್ತಿವೆ. ಪುಟ್ಬಾಲ್ ಕ್ರೀಡಾಕೂಟ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಹಾಕಿ ಕ್ರೀಡಾಕೂಟ ಗದಗ ಬೆಟಗೇರಿಯ ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಜರುಗುತ್ತಿವೆ ಎಂದರು.
ಈ ವೇಳೆ ನಗರಸಭೆ ಸದಸ್ಯ ಸುರೇಶ ಕಟ್ಟಿಮನಿ, ಮೋಹನ ಕಟ್ಟಿಮನಿ, ಹನುಮಂತಪ್ಪ ವೀರಾಪುರ, ಎಚ್.ಬಿ. ಗಡಾದ, ಸರ್ಫರಾಜ್ ಶೇಖ ಇದ್ದರು.ಎಂ.ಎ. ಯರಗುಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))