ಕ್ರೀಡೆಯಿಂದ ಉತ್ತಮ ಆರೋಗ್ಯ ಕಾಪಾಡಲು ಸಾಧ್ಯ: ವಿಜಯಾನಂದ ಕಾಶಪ್ಪನವರ

| Published : Jun 09 2024, 01:30 AM IST

ಕ್ರೀಡೆಯಿಂದ ಉತ್ತಮ ಆರೋಗ್ಯ ಕಾಪಾಡಲು ಸಾಧ್ಯ: ವಿಜಯಾನಂದ ಕಾಶಪ್ಪನವರ
Share this Article
  • FB
  • TW
  • Linkdin
  • Email

ಸಾರಾಂಶ

ಹುನಗುಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಹುನಗುಂದ

ಕ್ರೀಡೆಯಲ್ಲಿ ಭಾಗವಹಿಸುವುದರಿಂದ ನಿತ್ಯ ಒತ್ತಡದ ಜೀವನಕ್ಕೆ ಮುಕ್ತಿ ಸಿಗುತ್ತದೆ. ಕ್ರೀಡೆಯಿಂದ ಉತ್ತಮ ಆರೋಗ್ಯ ಕಾಪಾಡಲು ಸಾಧ್ಯ. ಕ್ರೀಡೆಯಲ್ಲಿ ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಬೇಕೆಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹುನಗುಂದ-ಇಳಕಲ್ಲ ತಾಲೂಕಿನ ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳು, ರಾಜ್ಯ ನೌಕರರ ಸಂಘ, ಭಾರತೀಯ ವೈದ್ಯಕೀಯ ಸಂಘ ಹಾಗೂ ಆಯುಷ್ಯ ಫೆಡರೇಶನ್‌ ಆಫ್ ಇಂಡಿಯಾ ಸಹಯೋಗದಿಂದ ಹಮ್ಮಿಕೊಂಡ ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿ ಮಾತನಾಡಿದರು.

ಹುನಗುಂದ ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್. ಅಂಗಡಿ, ಬದಾಮಿ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ. ಪಾಟೀಲ, ಮುಖ್ಯವೈಧ್ಯಾಧಿಕಾರಿ ಡಾ.ಮಂಜುನಾಥ ಅಂಕೋಲೇಕರ, ಡಾ.ರೇವಣ ಸಿದ್ದಪ್ಪ, ಡಾ.ಚುರಚಪ್ಪ ಶೆಲಲ್ಲಿಕೇರಿ, ಸಹಾಯಕ ಆಡಳಿತಾಧಿಕಾರಿ ಆರ್.ಡಿ. ಕನ್ನೊಳ್ಳಿ, ಆರೋಗ್ಯ ರಕ್ಷಣಾ ಸಮಿತಿ ಉಪಾಧ್ಯಕ್ಷ ಶಿವಾನಂದ ಕಂಠಿ, ಸದಸ್ಯರಾದ ಸಂಜೀವ ಜೋಷಿ, ರಫೀಕ್‌ ವಾಲೀಕಾರ, ಅಮರೇಶ ನಾಗೂರ, ನೌಕರರ ಸಂಘದ ಅಧ್ಯಕ್ಷ ಸಂಗಣ್ಣ ಹಂಡಿ, ಪರಶುರಾಮ ಪಮ್ಮಾರ ಸೇರಿದಂತೆ ಇತರರು ಇದ್ದರು.