ಸೆಂಟ್ರಲ್ ಕಾಮರ್ಸ್ ಕಾಲೇಜಿಗೆ ಕ್ರೀಡಾ ಚಾಂಪಿಯನ್‌ಷಿಪ್

| Published : Oct 01 2025, 01:00 AM IST

ಸೆಂಟ್ರಲ್ ಕಾಮರ್ಸ್ ಕಾಲೇಜಿಗೆ ಕ್ರೀಡಾ ಚಾಂಪಿಯನ್‌ಷಿಪ್
Share this Article
  • FB
  • TW
  • Linkdin
  • Email

ಸಾರಾಂಶ

ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿದ ೧೩ ವಿಭಾಗಗಳಲ್ಲಿ ಒಟ್ಟು ೧೦ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಹಾಗೂ ವಯಕ್ತಿಕ ಸ್ಪರ್ಧೆಗಳಲ್ಲಿ ವಿವಿಧ ೧೯ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿರುವುದು ಕಾಲೇಜು ಗುಣಮಟ್ಟದ ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರಾಮುಖ್ಯತೆ ನೀಡುತ್ತಿರುವುದಕ್ಕೆ ಸಾಕ್ಷಿ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾಗೂ ಪ್ರಶಸ್ತಿ ಪಡೆದ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೂ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಕ್ರೀಡಾಕೂಟದಲ್ಲಿ ಸೆಂಟ್ರಲ್ ಕಾಮರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ೩೨ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆಯುವ ಮೂಲಕ ಬಾಲಕರ ವಿಭಾಗದ ಚಾಂಪಿಯನ್‌ಷಿಪ್ ಹಾಗೂ ಸಮಗ್ರ ಚಾಂಪಿಯನ್‌ಷಿಪ್ ಪಡೆದು ಹಾಸನ ತಾಲೂಕಿನ ಕ್ರೀಡಾ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜುಗಳ ೨೦೨೫ನೇ ಸಾಲಿನ ಹಾಸನ ತಾಲೂಕು ’ಬಿ’ ಗುಂಪಿನ ಕ್ರೀಡಾಕೂಟದಲ್ಲಿ ಸೆಂಟ್ರಲ್ ಕಾಮರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ೩೨ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆಯುವ ಮೂಲಕ ಬಾಲಕರ ವಿಭಾಗದ ಚಾಂಪಿಯನ್‌ಷಿಪ್ ಹಾಗೂ ಸಮಗ್ರ ಚಾಂಪಿಯನ್‌ಷಿಪ್ ಪಡೆದು ಹಾಸನ ತಾಲೂಕಿನ ಕ್ರೀಡಾ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿದ ೧೩ ವಿಭಾಗಗಳಲ್ಲಿ ಒಟ್ಟು ೧೦ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಹಾಗೂ ವಯಕ್ತಿಕ ಸ್ಪರ್ಧೆಗಳಲ್ಲಿ ವಿವಿಧ ೧೯ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿರುವುದು ಕಾಲೇಜು ಗುಣಮಟ್ಟದ ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರಾಮುಖ್ಯತೆ ನೀಡುತ್ತಿರುವುದಕ್ಕೆ ಸಾಕ್ಷಿ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾಗೂ ಪ್ರಶಸ್ತಿ ಪಡೆದ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೂ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.