ಕ್ರೀಡೆ ದೈಹಿಕ-ಮಾನಸಿಕ ಸದೃಢತೆಗೆ ಪೂರಕ

| Published : Feb 05 2024, 01:46 AM IST

ಸಾರಾಂಶ

ದೊಡ್ಡಬಳ್ಳಾಪುರ: ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷರ ಫುಟ್‌ಬಾಲ್‌ ಪಂದ್ಯಾವಳಿಗೆ ಇಲ್ಲಿನ ಆರ್‌ಎಲ್‌ ಜೆಐಟಿ ಮೈದಾನದಲ್ಲಿ ಚಾಲನೆ ನೀಡಲಾಯಿತು.

ದೊಡ್ಡಬಳ್ಳಾಪುರ: ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷರ ಫುಟ್‌ಬಾಲ್‌ ಪಂದ್ಯಾವಳಿಗೆ ಇಲ್ಲಿನ ಆರ್‌ಎಲ್‌ ಜೆಐಟಿ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ, ಫುಟ್‌ಬಾಲ್‌ ಸೇರಿದಂತೆ ಹಲವು ಜಾಗತಿಕ ಹಾಗೂ ದೇಸೀಯ ಕ್ರೀಡೆಗಳತ್ತ ಯುವಜನತೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದ್ದು, ಉತ್ತಮ ಕ್ರೀಡಾಪಟು ಉತ್ತಮ ವ್ಯಕ್ತಿತ್ವವನ್ನೂ ಹೊಂದಿರುತ್ತಾನೆ. ಆ ಮೂಲಕ ನಾಯಕತ್ವ ಗುಣ ಬೆಳೆಯುತ್ತಿದೆ ಎಂದು ಹೇಳಿದರು.

ದೇಶ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆಯನ್ನು ಮಾಡುತ್ತಿದ್ದು, ಗ್ರಾಮೀಣ ಭಾಗದ ಕ್ರೀಡಾಪಟುಗಳ ಸಾಧನೆ ಅನನ್ಯವಾಗಿದೆ. ಫುಟ್‌ಬಾಲ್‌ ಆಟ ದೈಹಿಕ ಪರಿಶ್ರಮ ಮತ್ತು ಕ್ರೀಡಾ ಸ್ಫೂರ್ತಿಯ ಸಮ್ಮಿಳಿತ ಚಟುವಟಿಕೆಯಾಗಿದ್ದು, ಪಾಲ್ಗೊಂಡಿರುವ ಎಲ್ಲ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯನ್ನು ಮೆರೆಯುವ ಮೂಲಕ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ನಾಗರಾಜ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ನಿಕಟಪೂರ್ವ ಪ್ರಾಂಶುಪಾಲ ಪ್ರೊ.ರವಿಕಿರಣ್, ಉಪಪ್ರಾಂಶುಪಾಲ ದಕ್ಷಿಣಾಮೂರ್ತಿ, ದೈಹಿಕ ಶಿಕ್ಷಣ ನಿರ್ದೇಶಕ ವಿ.ಶ್ರೀನಿವಾಸ್, ಎಸ್‌ಡಿಯುಐಆರ್‌ಎಸ್‌ನ ಧನಂಜಯ್, ಪ್ರೌಢಶಾಲೆ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್, ವಿಭಾಗ ಮುಖ್ಯಸ್ಥ ಪ್ರಕಾಶ್, ಸ್ನಾತಕೋತ್ತರ ವಿಭಾಗ ಸಂಯೋಜಕಿ ಚೈತ್ರ, ಉದ್ಯೋಗ ತರಬೇತಿ ಅಧಿಕಾರಿ ಬಾಬುಸಾಬಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

22 ತಂಡಗಳು ಭಾಗಿ:

ಕ್ರೀಡಾ ಕೂಟದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ 22 ಪ್ರತಿಷ್ಠಿತ ಕಾಲೇಜುಗಳ ತಂಡಗಳು ಪಾಲ್ಗೊಂಡಿದ್ದು, ಭಾನುವಾರ ಈ ಪಂದ್ಯಾವಳಿಯ ಉಪಾಂತ್ಯ ಹಾಗೂ ಅಂತಿಮ ಪಂದ್ಯಗಳು, ಸಮಾರೋಪ ಕಾರ್ಯಕ್ರಮ ನಡೆಯಲಿದೆ.3ಕೆಡಿಬಿಪಿ1-

ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಮೈದಾನದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಫುಟ್‌ಬಾಲ್‌ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.