ಸಾರಾಂಶ
ಕ್ರೀಡೆಗಳು ಭವಿಷ್ಯದಲ್ಲಿ ಸವಾಲುಗಳನ್ನು ಸ್ವೀಕರಿಸಿ ಉತ್ತಮ ಜೀವನ ನಡೆಸಲು ಅಗತ್ಯವಾದ ಕೌಶಲ್ಯ ನಮ್ಮಲ್ಲಿ ಬೆಳೆಸುತ್ತವೆ.
ಪಿಯು ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಾಸಕಿ
ಕನ್ನಡಪ್ರಭ ವಾರ್ತೆ ಸಂಡೂರುಕ್ರೀಡೆಗಳು ಭವಿಷ್ಯದಲ್ಲಿ ಸವಾಲುಗಳನ್ನು ಸ್ವೀಕರಿಸಿ ಉತ್ತಮ ಜೀವನ ನಡೆಸಲು ಅಗತ್ಯವಾದ ಕೌಶಲ್ಯ ನಮ್ಮಲ್ಲಿ ಬೆಳೆಸುತ್ತವೆ ಎಂದು ಶಾಸಕಿ ಅನ್ನಪೂರ್ಣ ಈ ತುಕಾರಾಂ ಅಭಿಪ್ರಾಯಪಟ್ಟರು.
ಪಟ್ಟಣದ ಬಿಕೆಜಿ ಗ್ರುಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ಇಂದಿನ ಯುವಕರು ಕ್ರೀಡೆಗಳ ಬಗೆಗೆ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳ ಜೀವನ ಚರಿತ್ರೆ ಕ್ರೀಡಾಪಟುಗಳು ಓದಬೇಕು. ಯುವಕರು ರಾಷ್ಟ್ರದ ಆಸ್ತಿ. ತಾಲೂಕಿನ ಕ್ರೀಡಾಪಟುಗಳು ಉತ್ತಮ ಸಾಧನೆಯಿಂದ ಸಂಡೂರಿನ ಕೀರ್ತಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ತಿಳಿಸಿದರು.
ಬಿಕೆಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ರುದ್ರಗೌಡ ಮಾತನಾಡಿ, ಆರೋಗ್ಯಕರ ಜೀವನಕ್ಕಾಗಿ ಕ್ರೀಡೆಗಳು ಅಗತ್ಯ. ಬಿಕೆಜಿ ಗ್ರುಪ್ ಇಂತಹ ಕಾರ್ಯಕ್ರಮ ಆಯೋಜಿಸಿಲು ಸಿದ್ಧವಿದೆ. ಕ್ರೀಡಾಪಟುಗಳು ಕ್ರೀಡಾ ಸ್ಫೂರ್ತಿಯಿಂದ ಆಟವಾಡಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.ತಾಲೂಕು ಕ್ರೀಡಾ ಸಂಯೋಜಕ ಹಾಗೂ ಸರ್ಕಾರಿ ಬಾಲಕರ ಪಿಯು ಕಾಲೇಜಿನ ಪ್ರಾಚಾರ್ಯ ಸಿದ್ದೇಶ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ದ್ಯಾಮಪ್ಪ ಕಿನ್ನಾಳ, ಬಿಕೆಜಿ ಸಮೂಹ ಸಂಸ್ಥೆಯ ಪ್ರಾಚಾರ್ಯ ಕೆ.ವಿ. ಮೋಹನ್‌ರಾವ್, ಉಪ ಪ್ರಾಚಾರ್ಯ ಸಂತೋಷ್ ಜಟ್ಟಿ, ತೀರ್ಪುಗಾರರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.