ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ನರಸಮ್ಮ

| Published : Sep 03 2025, 01:00 AM IST

ಸಾರಾಂಶ

ತಾಲೂಕಿನ ಮಲಿಯಬಾದ್ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಹಾಗೂ ಗಾಜಗಾರ ಪೇಟೆ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಸ್ಥಳೀಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ರಾಯಚೂರು

ತಾಲೂಕಿನ ಮಲಿಯಬಾದ್ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಹಾಗೂ ಗಾಜಗಾರ ಪೇಟೆ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಸ್ಥಳೀಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.

ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸೇರಿದಂತೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘ ನಿ., ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಸಂಯುಕ್ತಾಕ್ಷರದಲ್ಲಿ ಹಮ್ಮಿಕೊಂಡಿದ್ದ ಕ್ರೀಟಾಕೂಟಗಳಿಗೆ ಮಹಾನಗರ ಪಾಲಿಕೆ ಅಧ್ಯಕ್ಷೆ ನರಸಮ್ಮ ಮಾಡಿಗೇರಿ ಚಾಲನೆ ನೀಡಿ, ಮಾತನಾಡಿದ ಅವರು ಸದೃಢವಾದ ಆರೋಗ್ಯ ಹೊಂದಲು ಕ್ರೀಡೆಗಳು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗಳಲ್ಲಿ ಭಾಗಿಯಾಗಬೇಕು. ಓದಿನಷ್ಟೇ ಆರೋಗ್ಯವು ಸಹ ತುಂಬಾ ಮುಖ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಬಿಡುವಿನ ಅವಧಿಯನ್ನು ಕ್ರೀಡಾಂಗಣದಲ್ಲಿ ಕಳೆಯಬೇಕು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘ ನಿ.ದ ಅಧ್ಯಕ್ಷರಾದ ನಾಗರೆಡ್ಡಿ ಹಂಚಿನಾಳ ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಹೇಮಲತಾ, ಎನ್.ಕೆ.ನಾಗರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಕೆ.ಈರಣ್ಣ ಕೋಸಗಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರೆಡ್ಡಿ, ದೈಹಿಕ ಶಿಕ್ಷಣ ಪರಿವೀಕ್ಷಕರ ಪರಶುರಾಮ ಹಜರತಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಯಂಕಪ್ಪ ಫೀರಂಗಿ, ಸಂಘದ ಉಪಾಧ್ಯಕ್ಷ ಡಿ. ವೆಂಕಟೇಶ, ನಿರ್ದೇಶಕರಾದ ನಾಮದೇವ, ಕೆ. ಗೀರಿಜಾ, ಮಲ್ಲಯ್ಯ, ಮಲ್ಲಿಕಾರ್ಜುನ ನಾಡಗೌಡ, ಮಲ್ಲಣ್ಣ ಸೇರಿದಂತೆ ಹಲವು ಸಂಘ ಸಂಸ್ಥೆಯ ಅಧ್ಯಕ್ಷರು, ಪಾದಾಧಿಕಾರಿಗಳು, ಶಿಕ್ಷಕರು ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.