ಸಾರಾಂಶ
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ,
ಶಿರಾ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಗಳು ಬಹಳ ಮುಖ್ಯ. ಪಾಠದ ಜೊತೆಗೆ ಕ್ರೀಡೆಯಲ್ಲಿ ಆಸಕ್ತಿ ವಹಿಸಿಕೊಳ್ಳಿ ಎಂದು ಬಿಜೆಪಿ ಎಸ್ಟಿ ಮೋರ್ಚಾ ಗ್ರಾಮಾಂತರ ಮಂಡಲ ಅಧ್ಯಕ್ಷ ತೇಜೇಶ್ವರ್ ಎಸ್. ಹೇಳಿದರು. ಅವರು ತಾಲೂಕಿನ ಚಿಕ್ಕನಹಳ್ಳಿ ಸರ್ಕಾರಿ ಎಸ್ ಕೆವಿಡಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದರು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ, ಇದರಿಂದ ಮಕ್ಕಳು ತಮ್ಮ ಅದ್ಯಯನ ಮತ್ತು ವೈಯಕ್ತಿಕ ಜೀವನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು. ಬಿಜೆಪಿ ನಿಕಟ ಪೂರ್ವ ಗ್ರಾಮಾಂತರ ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಹಳೆ ವಿದ್ಯಾರ್ಥಿ ಸಂಘದ ಲಕ್ಷ್ಮೀಕಾಂತ್, ಹಳೆ ವಿದ್ಯಾರ್ಥಿಗಳು, ಉದಯ ಜ್ಯೋತಿ ಕ್ರೀಡಾ ಸಂಘದ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.