ಕ್ರೀಡೆಯಿಂದ ಸಹೋದರತ್ವ ಭಾವನೆ

| Published : Sep 08 2025, 01:01 AM IST

ಸಾರಾಂಶ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಜಯಶಾಲಿಯಾಗುವ ಮೂಲಕ ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಉತ್ತಮ ಹೆಸರು ತಂದುಕೊಡುವಂತೆ ಆಟ ಪ್ರದರ್ಶನ ಮಾಡಬೇಕು

ಕುಷ್ಟಗಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಸಹೋದರತ್ವ ಭಾವನೆ ಮೂಡಲಿದೆ ಎಂದು ಪುರಸಭೆ ಅಧ್ಯಕ್ಷ ಮಹಾಂತೇಶ ಕಲಬಾವಿ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜಿಪಂ, ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಶ್ರೀಸ್ವಾಮಿ ವಿವೇಕಾನಂದ ಕ್ರೀಡಾ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಆರೋಗ್ಯದ ವೃದ್ಧಿಗೆ ಪೂರಕವಾಗಿದೆ ಎಂದರು.

ತಾಲೂಕು ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಜಯಶಾಲಿಯಾಗುವ ಮೂಲಕ ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಉತ್ತಮ ಹೆಸರು ತಂದುಕೊಡುವಂತೆ ಆಟ ಪ್ರದರ್ಶನ ಮಾಡಬೇಕು ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ದೈಹಿಕ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ ಜಾಲಿಗಿಡದ ಮಾತನಾಡಿ, ಪ್ರತಿಯೊಬ್ಬರು ಕಡ್ಡಾಯವಾಗಿ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾ ಸ್ಫೂರ್ತಿ ಮೆರೆಯಬೇಕು. ಇದರೊಂದಿಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು ಎಂದರು.

ದೈಹಿಕ ಶಿಕ್ಷಣ ಪರಿವೀಕ್ಷಕ ನಾಗಪ್ಪ ಬಿಳಿಯಪ್ಪನವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪುರಸಭೆ ಅಧಿಕಾರಿ ಬಸವರಾಜ, ಪ್ರಾಣೇಶ ಬಳ್ಳಾರಿ. ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಸೂಡಿ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ನಾಗರಾಜ್ ನಿಡಗುಂದಿ, ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಹನಿಫ್‌ ಬಿಳೆಕುದುರಿ, ಬಸವರಾಜ ಗುಡೂರ, ಗವಿಸಿದ್ದಪ್ಪ ನಾಗಲೀಕರ, ಹಿರಿಯ ಕ್ರೀಡಾಪಟು ರಮೇಶ ಮೇಲಿನಮನಿ ಸೇರಿದಂತೆ ಸ್ವಾಮಿ ವಿವೇಕಾನಂದ ಕ್ರೀಡಾ ಸಾಂಸ್ಕೃತಿಕ ಸಂಘದ ಪದಾಧಿಕಾರಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು.