ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಶಿಕ್ಷಣದ ಅವಿಭಾಜ್ಯ ಅಂಗ: ಚಂದ್ರಶೇಖರ್

| Published : Jan 26 2025, 01:35 AM IST

ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಶಿಕ್ಷಣದ ಅವಿಭಾಜ್ಯ ಅಂಗ: ಚಂದ್ರಶೇಖರ್
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೀಡೆ ಮತ್ತು ಸಂಸ್ಕಾತಿಕ ಚಟುವಟಿಕೆ ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ ಎಂದು ಪ್ರಾಂಶುಪಾಲ ಚಂದ್ರಶೇಖರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ ಎಂದು ಆಲೂರುಸಿದ್ದಾಪುರ ಸರ್ಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅಭಿಪ್ರಾಯಪಟ್ಟರು.

ಅವರು ಆಲೂರುಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕ್ರೀಡೋತ್ಸವ ಹಾಗೂ ಕಲೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯ ಜೊತೆಯಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆ ಮತ್ತು ಕಲೆ ಶಿಕ್ಷಣದ ಭಾಗವಾಗಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ದೃಢತೆಯನ್ನು ಹೆಚ್ಚಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಶೇಖರ್ ಮಾತನಾಡಿ, ಕ್ರೀಡೆಯಿಂದ ದೈಹಿಕ ಆರೋಗ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಯಿಂದ ಮಾನಸಿಕ ಆರೋಗ್ಯವು ಸುಧಾರಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳಲ್ಲಿರುವ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.

ಸಮಾರಂಭವನ್ನು ಆಲೂರುಸಿದ್ದಾಪುರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಮತ್ತು ಹಾಲಿ ಸದಸ್ಯೆ ದಮಯಂತಿ ಕರುಂಬಯ್ಯ ಉದ್ಘಾಟಿಸಿದರು. ಎಸ್‍ಡಿಎಂಸಿ ಅಧ್ಯಕ್ಷ ಹೇಮಾನಂದ್ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್, ಗ್ರಾ.ಪಂ.ಸದಸ್ಯರಾದ ತಾರಮಣಿ, ನಿಲ್ಲಮ್ಮ, ಮಲ್ಲಪ್ಪ, ಆಲೂರು ಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್, ದಾನಿಗಳಾದ ಲತಾ ಸೋಮಶೇಖರ್, ಪ್ರದೀಪ್, ಪ್ರೌಢಶಾಲಾ ಎಸ್‍ಡಿಎಂಸಿ ಉಪಾಧ್ಯಕ್ಷ ಗಿರೀಶ್ ಪೊನ್ನಪ್ಪ, ಶಾಲಾ ಮುಖ್ಯ ಶಿಕ್ಷಕ ಉದಯ್, ಶಿಕ್ಷಕರಾದ ಪ್ರಭಾಮಣಿ, ರಾಧ, ದೈಹಿಕ ಶಿಕ್ಷಣ ಶಿಕ್ಷಕ ಕರುಂಬಯ್ಯ ಮುಂತಾದವರು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತ್ ಮೂಲಕ ಕ್ರೀಡೋತ್ಸವ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಿಗೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.