ಕ್ರೀಡೆಗಳು ಮಕ್ಕಳ ದೈಹಿಕ ಬೆಳವಣಿಗೆ ಜೊತೆಗೆ ಮಾನಸಿಕ ಬೆಳವಣಿಗೆಗೂ ಸಹಕಾರಿಯಾಗುತ್ತವೆ ಎಂದು ಅಧಿರ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಅಧ್ಯಕ್ಷ ಬೋರೇಗೌಡ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಹಿರಿಯೂರು
ಕ್ರೀಡೆಗಳು ಮಕ್ಕಳ ದೈಹಿಕ ಬೆಳವಣಿಗೆ ಜೊತೆಗೆ ಮಾನಸಿಕ ಬೆಳವಣಿಗೆಗೂ ಸಹಕಾರಿಯಾಗುತ್ತವೆ ಎಂದು ಅಧಿರ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಅಧ್ಯಕ್ಷ ಬೋರೇಗೌಡ ಅಭಿಪ್ರಾಯಪಟ್ಟರು.ತಾಲೂಕಿನ ಬ್ಯಾಡರಹಳ್ಳಿಯ ಅಧಿರ ಪಬ್ಲಿಕ್ ಶಾಲೆಯಲ್ಲಿ ಶನಿವಾರ ನಡೆದ ಕ್ರೀಡಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೈಹಿಕ ಸಮತೋಲನ ಮತ್ತು ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಉಪಯುಕ್ತ. ಮೊಬೈಲ್, ಟಿವಿಗಳ ಹಾವಳಿಗೆ ಸಿಕ್ಕ ಇಂದಿನ ಮಕ್ಕಳು ಬಯಲಿನ ಸಾಂಪ್ರದಾಯಿಕ ಆಟಗಳನ್ನು ಮರೆತುಬಿಟ್ಟಿದ್ದಾರೆ. ಆದಷ್ಟು ಮಕ್ಕಳನ್ನು ಪಠ್ಯದ ಜೊತೆಗೆ ಕ್ರೀಡೆಗಳಲ್ಲೂ ಬಲಿಷ್ಠರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮತ್ತು ಪೋಷಕರ ಮೇಲಿದೆ ಎಂದರು.
ಕ್ರೀಡಾ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ವಾಲಿಬಾಲ್, ಕಬಡ್ಡಿ, ರನ್ನಿಂಗ್ ರೇಸ್, ಖೋ ಖೋ, ಮ್ಯೂಸಿಕಲ್ ಚೇರ್ ಮುಂತಾದ ಆಟಗಳನ್ನು ಆಡಿಸಲಾಯಿತು.ಈ ಸಂದರ್ಭದಲ್ಲಿ ಕ್ರೀಡಾ ತರಬೇತುದಾರರಾದ ಚೇತನ್, ಶಶಿಕುಮಾರ್, ಶಿಕ್ಷಕಿಯರಾದ ಸಾಧಿಯಾ ಬಾನು, ಶ್ವೇತಾ, ಕಾವೇರಿ, ಶಶಿಕಲಾ ಮುಂತಾದವರು ಹಾಜರಿದ್ದರು.