ಸಾರಾಂಶ
ಕನ್ನಡಪ್ರಭ ವಾರ್ತೆ ನಾಪೋಕ್ಲು
ಕ್ರೀಡೆ ಶಿಕ್ಷಣದಲ್ಲಿ ಒಂದು ಪ್ರಮುಖ ಅಂಗವಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಗೋಣಿಕೊಪ್ಪಲಿನ ಕಾಲ್ಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಬಾಚೇಟ್ಟಿರ ಗೌರಮ್ಮ ನಂಜಪ್ಪ ಹೇಳಿದರು.ಇಲ್ಲಿಗೆ ಸಮೀಪದ ಮೂರ್ನಾಡು ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮೂರ್ನಾಡು ವಿದ್ಯಾ ಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಕ್ರೀಡಾ ದಿನಾಚರಣೆಯನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಬಳಿಕ ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ ಹಾಗೂ ಶೈಕ್ಷಣಿಕ ಚಟುವಟಿಕೆಗಳೆರಡರಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕೆಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ. ಚೌರಿರ ಜಗತ್ ತಿಮ್ಮಯ್ಯ ವಹಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದು ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದು ಸ್ಪೂರ್ತಿದಾಯಕ ನುಡಿಗಳನ್ನಾಡಿದರು.
ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಮಾಸ್ ಡ್ರಿಲ್, ಡಂಬೆಲ್ಸ್, ಪಿರಮಿಡ್ ಹಾಗೂ ಜುಂಬ ನೃತ್ಯಗಳನ್ನು ಆಕರ್ಷಕವಾಗಿ ಪ್ರದರ್ಶಿಸಿದರು. ಕ್ರೀಡಾ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿ, ಶಿಕ್ಷಕರಿಗೆ ನಡೆದ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ , ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಅತಿಥಿಗಳು ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು.ಈ ಸಂದರ್ಭ ದಾನಿಗಳು ಮತ್ತು ನಿವೃತ್ತ ಶಿಕ್ಷಕಿಯಾದ ಬಾಚೇಟ್ಟಿರ ಕಮಲು ಮುದ್ದಯ್ಯ, ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ನಂದೇಟಿರ ರಾಜ ಮಾದಪ್ಪ, ಕಾರ್ಯದರ್ಶಿಗಳಾದ ವೇಣು ಅಪ್ಪಣ್ಣ, ಖಜಾಂಚಿಗಳಾದ ಯತೀಶ್ ವಿ.ಎ , ನಿರ್ದೇಶಕರಾದ ಪುದಿಯೋಕ್ಕಡ ಹರೀಶ್ ದೇವಯ್ಯ, ಪಾಣತ್ತಲೆ ಹರೀಶ್ ಹಾಗೂ ಈರಮಂಡ ಸೋಮಣ್ಣನ, ಸಲೀನ ಜಗತ್ ಹಾಗು ವಿದ್ಯಾ ಸಂಸ್ಥೆಯ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.