ಕ್ರೀಡೆಯಿಂದ ಒತ್ತಡರಹಿತ ಕೆಲಸ ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

| Published : Mar 17 2025, 12:31 AM IST

ಕ್ರೀಡೆಯಿಂದ ಒತ್ತಡರಹಿತ ಕೆಲಸ ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸರ್ಕಾರಿ ನೌಕರರು ಪ್ರತಿದಿನ ಕೆಲಸದ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಅವರು ಕ್ರೀಡೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕವಾಗಿ ಮಾತ್ರವಲ್ಲ, ಮಾನಸಿಕವಾಗಿಯೂ ಒತ್ತಡರಹಿತವಾಗಿ ಲವಲವಿಕೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.

ಅವರು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಬಹುದು. ನೌಕರ ಆರೋಗ್ಯವಾಗಿದ್ದಲ್ಲಿ ಅವರ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಸೋಲು-ಗೆಲುವುಗಳ ಬಗ್ಗೆ ಗಮನಹರಿಸದೇ ಕ್ರೀಡಾಸ್ಫೂರ್ತಿಯನ್ನು ಬೆಳೆಸಿಕೊಂಡು ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಪರಸ್ಪರ ಪರಿಚಯವಾಗಿ ಸ್ನೇಹವನ್ನು ಬೆಳೆಸಿಕೊಳ್ಳಬಹುದು. ಇದರಿಂದ ಸರ್ಕಾರಿ ನೌಕರರ ವಲಯದಲ್ಲಿ ಸೌಹಾರ್ದ ವಾತಾವರಣ ನಿರ್ಮಿಸಬಹುದಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ್ ಅಂಪಾರು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತನ್ನ, ಕಾರ್ಕಳ ತಾಲೂಕು ಅಧ್ಯಕ್ಷ ಬಾಲಕೃಷ್ಣ, ಕುಂದಾಪುರ ತಾಲೂಕು ಅಧ್ಯಕ್ಷ ಡಾ.ನಾಗೇಶ್, ಬೈಂದೂರು ಅಧ್ಯಕ್ಷ ಶೇಖರ ಪೂಜಾರಿ, ಕಾಪು ಅಧ್ಯಕ್ಷ ಬಸವರಾಜ್, ಹೆಬ್ರಿ ಅಧ್ಯಕ್ಷ ತಹಸೀಲ್ದಾರ್ ಪ್ರಸಾದ್, ಕ್ರೀಡಾ ಕಾರ್ಯದರ್ಶಿ ದಿವಾಕರ ನಾಯ್ಕ, ದೀಪಾ, ಜಿಲ್ಲೆಯ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸರ್ಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಸ್ವಾಗತಿಸಿದರು. ಸತೀಶ್ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ದಯಾನಂದ ವಂದಿಸಿದರು.