ಇಂದಿನ ಯುವ ಪೀಳಿಗೆ ಮೊಬೈಲ್ ಹಾಗೂ ದುಶ್ಚಟಗಳಿಗೆ ದಾಸರಾಗುತ್ತಿರುವ ಸಂದರ್ಭದಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದು ಶ್ಲಾಘನೀಯ ಕಾರ್ಯ. ಗ್ರಾಮೀಣ ಭಾಗದಲ್ಲಿ ಅಪಾರ ಪ್ರತಿಭೆಗಳು ಅಡಗಿವೆ. ಅವರಿಗೆ ಸೂಕ್ತ ವೇದಿಕೆ ಸಿಕ್ಕರೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಮಿಂಚಲು ಸಾಧ್ಯ.
ಕನ್ನಡಪ್ರಭ ವಾರ್ತೆ, ಕೆ.ಆರ್.ಪೇಟೆ
ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸಾಮರ್ಥ್ಯ ವೃದ್ಧಿಸಿಕೊಳ್ಳಲು ಕ್ರೀಡೆಗಳು ಅತ್ಯಗತ್ಯ ಎಂದು ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.ತಾಲೂಕಿನ ಬೂಕನಕೆರೆ ಹೋಬಳಿಯ ಹೊಸಕೋಟೆ ಗ್ರಾಮದ ಶ್ರೀಬಸವೇಶ್ವರ ಯುವ ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿರುವ ದರ್ಶನ್ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಇಂದಿನ ಯುವ ಪೀಳಿಗೆ ಮೊಬೈಲ್ ಹಾಗೂ ದುಶ್ಚಟಗಳಿಗೆ ದಾಸರಾಗುತ್ತಿರುವ ಸಂದರ್ಭದಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದು ಶ್ಲಾಘನೀಯ ಕಾರ್ಯ. ಗ್ರಾಮೀಣ ಭಾಗದಲ್ಲಿ ಅಪಾರ ಪ್ರತಿಭೆಗಳು ಅಡಗಿವೆ. ಅವರಿಗೆ ಸೂಕ್ತ ವೇದಿಕೆ ಸಿಕ್ಕರೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಮಿಂಚಲು ಸಾಧ್ಯ. ಇಂತಹ ಟೂರ್ನಿಗಳು ಯುವಕರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸುತ್ತದೆ. ಕ್ರೀಡೆಯಿಂದ ದೈಹಿಕ ಸದೃಢತೆ ಜೊತೆಗೆ ಮಾನಸಿಕ ಸ್ಥೈರ್ಯವೂ ಹೆಚ್ಚುತ್ತದೆ. ಶ್ರೀಬಸವೇಶ್ವರ ಯುವ ಕ್ರಿಕೆಟರ್ಸ್ ತಂಡದ ಯುವಕರು ಒಗ್ಗಟ್ಟಾಗಿ ಈ ಪಂದ್ಯಾವಳಿಯನ್ನು ಆಯೋಜಿಸಿರುವುದು ಮಾದರಿಯಾಗಿದೆ. ನಿಮ್ಮಂತಹ ಯುವಕರ ಕ್ರೀಡಾ ಸೇವೆಗೆ ನನ್ನ ಬೆಂಬಲ ಸದಾ ಇರುತ್ತದೆ. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿ ಎಂದು ಅವರು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಸುಜೇಂದ್ರ ಕುಮಾರ್, ಚೇತನ್, ಮಂಜುನಾಥ್, ಕಾರ್ತಿಕ್, ಮಡುವಿನಕೋಡಿ ದೀಪು, ಸತೀಶ್, ಗ್ರಾಮದ ಹಿರಿಯ ಹಾಗೂ ಕಿರಿಯ ಮುಖಂಡರು ಯುವಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಅ.8ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಪಾಂಡವಪುರ: ಪಟ್ಟಣದ ಟಿಎಪಿಸಿಎಂಎಸ್‌ನಲ್ಲಿ ಅ.8 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನದಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್, ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಹಾಗೂ ರಾಜ್ಯ ರೈತ ಸಂಘದ ಸಹಯೋಗ ಅಂದು ಬೆಳಗ್ಗೆ 9.30 ರಿಂದ ಸಂಜೆ 5.30ರವರೆಗೆ ನಡೆಯುವ ಶಿಬಿರದಲ್ಲಿ ಬೆಂಗಳೂರಿನ ಖ್ಯಾತ ಆಸ್ಪತ್ರೆಗಳ ನುರಿತ ತಜ್ಞ ವೈದ್ಯರು ಭಾಗವಹಿಸಿ ತಪಾಸಣೆ ನಡೆಸಲಿದ್ದಾರೆ.ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಆರೋಗ್ಯ ಸೇವೆ ತಲುಪಬೇಕು ಎಂಬ ಧ್ಯೇಯದೊಂದಿಗೆ, ಮೇಲುಕೋಟೆ ಶಾಸಕರಾದ ಶ್ರೀ ದರ್ಶನ್ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನದಲ್ಲಿ ತಾಲೂಕಿನ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುಟ್ಟಣ್ಣಯ್ಯ ಫೌಂಡೇಶನ್, ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಹಾಗೂ ರಾಜ್ಯ ರೈತ ಸಂಘದ ಸಹಯೋಗದಲ್ಲಿ ಈ ಶಿಬಿರ ನಡೆಯಲಿದೆ. ಬೆಂಗಳೂರಿನ ಖ್ಯಾತ ಆಸ್ಪತ್ರೆಗಳ ನುರಿತ ತಜ್ಞ ವೈದ್ಯರು ಭಾಗವಹಿಸಿ ತಪಾಸಣೆ ನಡೆಸಲಿದ್ದಾರೆ.ಶಿಬಿರದಲ್ಲಿ ದಂತ, ಕಣ್ಣು, ಸಾಮಾನ್ಯ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಪಾದ ತಪಾಸಣೆ (Podiatry), ಮೂಳೆರೋಗ ತಪಾಸಣೆ ಮಾಡಲಾಗುವುದು. ಮೀಣ ಭಾಗದ ಜನರಿಗೆ ಬೆಂಗಳೂರಿನ ತಜ್ಞ ವೈದ್ಯರಿಂದ ಉಚಿತವಾಗಿ ಸೂಕ್ತ ಚಿಕಿತ್ಸಾ ಸಲಹೆ ಹಾಗೂ ತಪಾಸಣೆ ಒದಗಿಸುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ. ತಾಲೂಕು ಸೇರಿದಂತೆ ಸುತ್ತಮುತ್ತಲಿನ ಸಾರ್ವಜನಿಕರು ಮತ್ತು ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.