ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ವೈದ್ಯರಾದ ಡಾ.ಮಂಜುದೇವ. ಎಸ್.ಎನ್ ಮತ್ತು ಡಾ.ಪ್ರಮೋದ ಅವರು ಭಾರತೀಯ ವೈದ್ಯಕೀಯ ಸಂಘದ ರಾಯಚೂರು ಶಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ ಮತ್ತು ಮಿಶ್ರ ಡಬಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಪ್ರಥಮ ಬಹುಮಾನ ಪಡೆದಿದ್ದಾರೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ವೈದ್ಯರಾದ ಡಾ.ಮಂಜುದೇವ. ಎಸ್.ಎನ್ ಮತ್ತು ಡಾ.ಪ್ರಮೋದ ಅವರು ಭಾರತೀಯ ವೈದ್ಯಕೀಯ ಸಂಘದ ರಾಯಚೂರು ಶಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ ಮತ್ತು ಮಿಶ್ರ ಡಬಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಪ್ರಥಮ ಬಹುಮಾನ ಪಡೆದಿದ್ದಾರೆ.
ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕೊಪ್ಪಳದ ಗವಿಸಿದ್ಧೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಲಬುರಗಿ ವಿಭಾಗ ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಎಸ್.ಎನ್.ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಮತ್ತು ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದಿದೆ.ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಈಜು ಕ್ರೀಡಾಕೂಟದಲ್ಲಿ ಎಸ್.ಎನ್.ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ದೀಪಾ ಗಿಲ್ಡಾ ನಾಲ್ಕು ಸ್ವರ್ಣ ಪದಕಗಳನ್ನು, ನಾಲ್ಕು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳನ್ನು ಹಾಗೂ ಪ್ರಮೋದ, ರೋಹಿತ್, ಶ್ರೇಯಸ್ ತಲಾ ಒಂದೊಂದು ಕಂಚಿನ ಪದಕ ಪಡೆದಿದ್ದಾರೆ. ವಿದ್ಯಾರ್ಥಿಯರ ವಿಭಾಗದಲ್ಲಿ ವೈಷ್ಣವಿ, ನಯನಾ, ನಿಮಿಷಾ ಮತ್ತು ನವ್ಯಾ ತಲಾ ಒಂದೊಂದು ಕಂಚಿನ ಪದಕ ಪಡೆದರು. ಈ ಎಲ್ಲ ಕ್ರೀಡಾಕೂಟಗಳಲ್ಲಿ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ತಂಡದ ನೇತೃತ್ವವನ್ನು ದೈಹಿಕ ನಿರ್ದೇಶಕ ಡಾ.ವಿಜಯಕುಮಾರ ಹಿರೇಮಠ ಅವರು ವಹಿಸಿದ್ದರು. ಕ್ರೀಡಾ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವೈದ್ಯರ ಮತ್ತು ವಿದ್ಯಾರ್ಥಿಗಳ ತಂಡವನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ.ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಮತ್ತು ಡಾ.ಸಂತೋಷ ಶೀಲವಂತ ಅಭಿನಂದಿಸಿದ್ದಾರೆ.